ಬೆಂಗಳೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ) ನೀವೇಶನ ಹಂಚಿಕೆ ಹಗರಣ ರಾಜ್ಯ ರಾಜಕೀಯದಲ್ಲಿ ಭಾರಿ ಸದ್ದು ಮಾಡಿದೆ. ಈ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬ ಭಾಗಿಯಾಗಿದೆ ಎಂಬ ಆರೋಪ ಕೇಳಿಬಂದಿದೆ.
ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಕೂಡಲೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಬೇಕೆಂದು ವಿಪಕ್ಷಗಳು ಆಗ್ರಹಿಸುತ್ತಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಿನಾಮೆ ಆಗ್ರಹಿಸಿ ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ಮಾಡಲು ಸಿದ್ದವಾಗಿವೆ.
ಶನಿವಾರ ಆಗಸ್ಟ 3 ಬೆಳಿಗ್ಗೆ 8.00 ಗಂಟೆಗೆ ಕೆಂಗೇರಿಯ ಕೆಂಪಮ್ಮ ದೇವಸ್ಥಾನದ ಬಳಿ ಇರುವ ಜೆ.ಕೆ. ಗ್ರ್ಯಾಂಡ್ ಅರೆನಾ ಸೆಂಟರ್ನಲ್ಲಿ ಪಾದಯಾತ್ರೆ ಉದ್ಘಟನಾ ಕಾರ್ಯಕ್ರಮ ನಡೆಯಲಿದೆ. ಬಳಿಕ 10 ಗಂಟೆ ಸುಮಾರಿಗೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ.