Join The Telegram | Join The WhatsApp |
ಬೆಂಗಳೂರು : ಹೃದಯಾಘಾತ ಸಂಭವಿಸಿದ್ದರಿಂದ ಅವರು ಕೊನೆಯುಸಿರು ಎಳೆದಿದ್ದಾರೆ ಎಂದು ತಿಳಿದು ಬಂದಿದೆ. ಅವರಿಗೆ 74 ವರ್ಷ ವಯಸ್ಸಾಗಿತ್ತು.
ಯಜಮಾನ, ಸೂರ್ಯವಂಶ ಸೇರಿದಂತೆ ಹಲವು ಸಿನಿಮಾಗಳಲ್ಲಿ ಪೋಷಕ ಪಾತ್ರ ಮಾಡಿ ಗಮನ ಸೆಳೆದಿದ್ದ ನಟ ಲಕ್ಷ್ಮಣ್ ಅವರು ಇಂದು ನಿಧನ ಹೊಂದಿದ್ದಾರೆ.
ಹೃದಯಾಘಾತ ಸಂಭವಿಸಿದ್ದರಿಂದ ಅವರು ಕೊನೆಯುಸಿರು ಎಳೆದಿದ್ದಾರೆ ಎಂದು ತಿಳಿದು ಬಂದಿದೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ಲಕ್ಷ್ಮಣ್ ನಿಧನಕ್ಕೆ ಸ್ಯಾಂಡಲ್ವುಡ್ ಸೆಲೆಬ್ರಿಟಿಗಳು ಹಾಗೂ ಸಿನಿಪ್ರಿಯರು ಸಂತಾಪ ಸೂಚಿಸಿದ್ದಾರೆ.
ಲಕ್ಷ್ಮಣ್ ಅವರು ಪೋಷಕ ಪಾತ್ರದ ಮೂಲಕ ಗಮನ ಸೆಳೆದಿದ್ದರು. ಅನೇಕ ಸಿನಿಮಾಗಳಲ್ಲಿ ಅವರು ಪೊಲೀಸ್ ಅಧಿಕಾರಿ ಪಾತ್ರ ಮಾಡಿದ್ದರು.
ವೃತ್ತಿ ಜೀವನದಲ್ಲಿ 200ಕ್ಕೂ ಅಧಿಕ ಸಿನಿಮಾಗಳಲ್ಲಿ ಲಕ್ಷ್ಮಣ್ ಬಣ್ಣ ಹಚ್ಚಿದ್ದರು. ‘ಒಲವಿನ ಉಡುಗೊರೆ’, ‘ಸಾಂಗ್ಲಿಯಾನ’ ಮೊದಲಾದ ಸಿನಿಮಾಗಳಲ್ಲಿ ಅವರು ಬಣ್ಣ ಹಚ್ಚಿದ್ದರು. ಅಂಬರೀಷ್, ವಿಷ್ಣುವರ್ಧನ್, ಶಂಕರ್ ನಾಗ್ ಸೇರಿದಂತೆ ಕನ್ನಡದ ದಿಗ್ಗಜರ ಜೊತೆ ಅವರು ತೆರೆ ಹಂಚಿಕೊಂಡಿದ್ದರು.
Join The Telegram | Join The WhatsApp |