Ad imageAd image

ಕಾಶ್ಮೀರದಲ್ಲಿ 7 ಉಗ್ರರನ್ನು ಹೊಡೆದುರುಳಿಸಿದ ಬಿಎಸ್‌ಎಫ್

Bharath Vaibhav
ಕಾಶ್ಮೀರದಲ್ಲಿ 7 ಉಗ್ರರನ್ನು ಹೊಡೆದುರುಳಿಸಿದ ಬಿಎಸ್‌ಎಫ್
WhatsApp Group Join Now
Telegram Group Join Now

ನವದೆಹಲಿ/ಜಮ್ಮು: ಜಮ್ಮು ಮತ್ತು ಕಾಶ್ಮೀರದ ಅಂತರರಾಷ್ಟ್ರೀಯ ಗಡಿ ಬಳಿ ಒಳಮಸುಳಲು ಯತ್ನಿಸಿದ್ದ ಏಳು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಗಡಿ ಭದ್ರತಾ ಪಡೆ (ಬಿಎಸ್ಎಫ್) ವಕ್ತಾರರು ತಿಳಿಸಿದ್ದಾರೆ. ಗುರುವಾರ ತಡರಾತ್ರಿ ಸಾಂಬಾ ಸೆಕ್ಟರ್‌ನಲ್ಲಿ ಒಳಮಸುಳಲು ಯತ್ನಿಸುತ್ತಿದ್ದ ಉಗ್ರದ ಚಲನವಲನವನ್ನು ಗಮನಿಸಿ ಸೇವೆಯು ಕಾರ್ಯಾಚರಣೆ ಆರಂಭಿಸಿದ.
ಈ ವೇಳೆ ಉಗ್ರರು ಹಾಗೂ ಸೇವಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆಯಿತು ಎಂದು ಬಿಎಸ್ಎಫ್ ವಕ್ತಾರರು ಹೇಳಿದ್ದಾರೆ.
ಗುಂಡಿನ ಚಕಮಕಿಯ ವಿಡಿಯೊವನ್ನು ಬಿಎಸ್‌ಎಫ್ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿ ಕೊಂಡಿದೆ.

ಏಪ್ರಿಲ್ 22ರಂದು ಕಾಶ್ಮೀರದ ವಹಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಭಾರತದ ಸಶಸ್ತ್ರ ಪಡೆಗಳು ‘ಆಪರೇಷನ್ ಸಿಂಧೂರ’ದ ಮೂಲಕ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿತ್ತು. ಇದರ ಬೆನ್ನಲ್ಲೇ ಗಡಿಯಲ್ಲಿ ಎರಡೂ ದೇಶಗಳ ನಡುವೆ ಸೇನಾ ಸಂಘರ್ಷ ತೀವ್ರಗೊಂಡಿದೆ.

‘ದೇಶದ ಪಶ್ಚಿಮ ಭಾಗದಲ್ಲಿರುವ ಭಾರತೀಯ ವಾಯುಪಡೆಯ 13 ಸೇರಿದಂತೆ ಒಟ್ಟು 15 ಸೇವಾ ನೆಲೆಗಳ ಮೇಲೆ ಡೋವ್ ಹಾಗೂ ಕ್ಷಿಪಣಿಗಳ ಮೂಲಕ ದಾಳಿ ನಡೆಸಿ ಧ್ವಂಸಗೊಳಿಸುವ ವಾತಿಸ್ತಾನದ ಪ್ರಯತ್ನವನ್ನು ಭಾರತೀಯ ಸಶಸ್ತ್ರ ಪಡೆಗಳು ವಿಫಲಗೊಳಿಸಿವೆ. ವಾಕ್ ಕ್ರಿಯೆಗೆ ಪ್ರತಿದಾಳಿಯ ಮೂಲಕ ಲಾಹೋರ್‌ನಲ್ಲಿರುವ ವಾಯು ರಕ್ಷಣಾ ವ್ಯವಸ್ಥೆಯನ್ನು ನಾಶಗೊಳಿಸಲಾಗಿದೆ ಎಂದು ಭಾರತೀಯ ಅಧಿಕಾರಿಗಳು ಹೇಳಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!