ಲಖನೌ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಲ್ಲಾ ಧರ್ಮಗಳನ್ನು ಸಮಾನವಾಗಿ ಪರಿಗಣಿಸಬೇಕು. ಆದರೆ ಮುಸ್ಲಿಮರ ಮೇಲೆ ಮಲತಾಯಿ ಧೋರಣೆ ಅನುಸರಿಸಲಾಗುತ್ತಿದೆ ಎಂದು ಬಹುಜನ ಸಮಾಜ ಪಕ್ಷದ(ಬಿಎಸ್‌ಪಿ) ನಾಯಕಿ ಮಾಯಾವತಿ ಮಂಗಳವಾರ ಆರೋಪಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಇಂತಹ ತಾರತಮ್ಯವು ಸಮಾಜದಲ್ಲಿ ಶಾಂತಿ ಮತ್ತು ಸಾಮರಸ್ಯಕ್ಕೆ ಧಕ್ಕೆ ತರಬಹುದು. ಇದು ಬಹಳ ಕಳವಳಕಾರಿ ವಿಷಯ ಎಂದಿದ್ದಾರೆ.
ಭಾರತವು ಎಲ್ಲಾ ಧರ್ಮಗಳನ್ನು ಗೌರವಿಸುವ ಜಾತ್ಯತೀತ ದೇಶ. ಹೀಗಿರುವಾಗ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಯಾವುದೇ ಪಕ್ಷಪಾತವಿಲ್ಲದೆ ಎಲ್ಲ ಧರ್ಮದವರನ್ನು ಸಮಾನವಾಗಿ ಕಾಣಬೇಕು.ಆದರೆ ಧಾರ್ಮಿಕ ವಿಚಾರಗಳಲ್ಲಿ ಮುಸ್ಲಿಮರ ಮೇಲೆ ಮಲತಾಯಿ ಧೋರಣೆ ಅನುಸರಿಸುತ್ತಿರುವುದು ಸರಿಯಲ್ಲ ಎಂದು ಹೇಳಿದ್ದಾರೆ.




