ನವದೆಹಲಿ: 2026 ರ ಬಜೆಟ್ 140 ಕೋಟಿ ಭಾರತೀಯರ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ, ಸುಧಾರಣಾ ಹಾದಿಯನ್ನು ಬಲಪಡಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಕೇಂದ್ರ ಬಜೆಟ್ 140 ಕೋಟಿ ಭಾರತೀಯರ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ. ಇದು ಸುಧಾರಣಾ ಪ್ರಯಾಣವನ್ನು ಬಲಪಡಿಸುತ್ತದೆ ಮತ್ತು ವಿಕ್ಷಿತ್ ಭಾರತಕ್ಕೆ ಸ್ಪಷ್ಟ ಮಾರ್ಗಸೂಚಿಯನ್ನು ರೂಪಿಸುತ್ತದೆ ಎಂದು ಕೇಂದ್ರ ಬಜೆಟ್ 2026 ರ ಕುರಿತು ಪ್ರಧಾನಿ ಮೋದಿ ಹೇಳಿದರು.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇತಿಹಾಸ ನಿರ್ಮಿಸಿದ್ದಾರೆ. ಐತಿಹಾಸಿಕ ಬಜೆಟ್ ಮಂಡಿಸಿದ್ದಾರೆ. ಈ ಬಜೆಟ್ ದೇಶದ ಭವಿಷ್ಯದ ಕನಸುಗಳನ್ನು ಸಾಕಾರಗೊಳಿಸುತ್ತದೆ.
ದೇಶದ ಅಭಿವೃದ್ಧಿಗೆ ಹೊಸ ಸ್ಪರ್ಶ ಸಿಗಲಿದೆ. ಭಾರತ ಮೂರನೇ ಆರ್ಥಿಕತೆಯ ದೇಶವಾಗಲಿದೆ. ಈ ಬಜೆಟ್ ದೇಶದ ಭವಿಷ್ಯದ ಕನಸುಗಳನ್ನು ಸಾಕಾರಗೊಳಿಸುತ್ತದೆ ಎಂದು ಹೇಳಿದ್ದಾರೆ.
ಕೇಂದ್ರ ಬಜೆಟ್ 2026 ಅನ್ನು “ಐತಿಹಾಸಿಕ” ಎಂದು ಬಣ್ಣಿಸಿದ ಪ್ರಧಾನಿ ನರೇಂದ್ರ ಮೋದಿ, ಇದು ಮಹಿಳೆಯರ ಹೆಚ್ಚುತ್ತಿರುವ ಸಬಲೀಕರಣ ಮತ್ತು ದೇಶದ ವಿಸ್ತರಿಸುತ್ತಿರುವ ಅವಕಾಶಗಳನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದಾರೆ.
ಸತತ ಒಂಬತ್ತನೇ ಬಾರಿಗೆ ಬಜೆಟ್ ಮಂಡಿಸಿದ್ದಕ್ಕಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಶ್ಲಾಘಿಸಿದ ಪ್ರಧಾನಿ ಮೋದಿ, ಮಹಿಳಾ ಹಣಕಾಸು ಸಚಿವೆಯಾಗಿ ಅವರು ಹೊಸ ದಾಖಲೆಯನ್ನು ಸೃಷ್ಟಿಸಿದ್ದಾರೆ ಎಂದು ಹೇಳಿದರು.
ಬಜೆಟ್ “ಅಪಾರ ಅವಕಾಶಗಳ ಹೆದ್ದಾರಿ”ಯಂತೆ ಕಾರ್ಯನಿರ್ವಹಿಸುತ್ತದೆ. ಭಾರತದ ಉಜ್ವಲ ಮತ್ತು ಸಮೃದ್ಧ ಭವಿಷ್ಯದ ಅಡಿಪಾಯವನ್ನು ಬಲಪಡಿಸುತ್ತದೆ ಎಂದು ಅವರು ಹೇಳಿದರು.




