ನವದೆಹಲಿ : ಆದಾಯ ತೆರಿಗೆದಾರರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ತೆರಿಗೆ ವಿನಾಯಿತಿ ಮಿತಿ 12 ಲಕ್ಷಕ್ಕೆ ಏರಿಕೆ ಮಾಡುವುದಾಗಿ ನಿರ್ಮಲಾ ಸೀತಾರಾಮನ್ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ.
12 ಲಕ್ಷ ರೂಪಾಯಿವರೆಗೂ ಆದಾಯ ತೆರಿಗೆ ಇಲ್ಲ 4 ಲಕ್ಷದಿಂದ 8 ಲಕ್ಷದವರೆಗೆ ಶೇ.5ರಷ್ಟು ತೆರಿಗೆ 8 ಲಕ್ಷದಿಂದ 11 ಲಕ್ಷದವರೆಗೆ ಶೇ.10ರಷ್ಟು ತೆರಿಗೆ 12 ಲಕ್ಷದಿಂದ 15 ಲಕ್ಷದವರೆಗೆ ಶೇ.15ರಷ್ಟು ತೆರಿಗೆ 15 ಲಕ್ಷದಿಂದ 20 ಲಕ್ಷದವರೆಗೆ ಶೇ.20ರಷ್ಟು ತೆರಿಗೆ 20 ಲಕ್ಷದಿಂದ 24 ಲಕ್ಷದರೆಗೆ ಶೇ.25ರಷ್ಟು ತೆರಿಗೆ 24 ಲಕ್ಷ ಮೇಲ್ಪಟ್ಟ ಆದಾಯಕ್ಕೆ ಶೇ.30ರಷ್ಟು ತೆರಿಗೆಎಂದು ಹೇಳಿದ್ದಾರೆ.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ದಾಖಲೆಯ ಎಂಟನೇ ಕೇಂದ್ರ ಬಜೆಟ್ ಅನ್ನು ಸಂಸತ್ತಿನಲ್ಲಿ ಮಂಡಿಸುತ್ತಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೂರನೇ ಅವಧಿಯ ಮೊದಲ ಪೂರ್ಣ ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮನ್, ಸತತ ಎಂಟು ಬಾರಿ ಕೇಂದ್ರ ಬಜೆಟ್ ಮಂಡಿಸಿದ ಏಕೈಕ ಹಣಕಾಸು ಸಚಿವೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.