Ad imageAd image

ಬಜೆಟ್ ನಲ್ಲಿ ದಲಿತ ಸಮುದಾಯಕ್ಕೆ ಬಂಪರ್ ಗಿಫ್ಟ್ : ಸಿದ್ದರಾಮಯ್ಯ ಘೋಷಣೆ 

Bharath Vaibhav
ಬಜೆಟ್ ನಲ್ಲಿ ದಲಿತ ಸಮುದಾಯಕ್ಕೆ ಬಂಪರ್ ಗಿಫ್ಟ್ : ಸಿದ್ದರಾಮಯ್ಯ ಘೋಷಣೆ 
WhatsApp Group Join Now
Telegram Group Join Now

ಬೆಂಗಳೂರು : ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ದಲಿತ ಮುಖಂಡರುಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ.

ಶೋಷಿತರ, ದಲಿತ ಸಮಯದಾಯಗಳ ಬೇಡಿಕೆಗಳನ್ನು ನಾನು ಮುಖ್ಯಮಂತ್ರಿ ಆದ ಬಳಿಕ ನಿರಂತರವಾಗಿ ಈಡೇರಿಸುತ್ತಲೇ ಇದ್ದೇನೆ.ದಲಿತರ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್ ನ ಅಭಿವೃದ್ಧಿ ಹಣದಲ್ಲಿ ಶೇ24 ರಷ್ಟು ಹಣ ಮೀಸಲಾಗಿಡುವ ಕಾಯ್ದೆ ಜಾರಿ ಮಾಡಿದ್ದು ನಮ್ಮ ಸರ್ಕಾರ.

ಈ ಕಾಯ್ದೆಯನ್ನು ಕೇಂದ್ರದ ಬಿಜೆಪಿ ಸರ್ಕಾರವಾಗಲಿ, ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲೂ ಜಾರಿ ಮಾಡಿಲ್ಲ. ದಲಿತ ಸಮುದಾಯದ ಗುತ್ತಿಗೆದಾರರಿಗೆ ಒಂದು ಕೋಟಿ ರೂಪಾಯಿ ವರೆಗಿನ ಗುತ್ತಿಗೆಯಲ್ಲಿ ಮೀಸಲಾತಿ ತಂದಿದ್ದು ನಾವು ಮಾತ್ರ. ಇದನ್ನು 2 ಕೋಟಿಗೆ ವಿಸ್ತರಿಸಬೇಕು ಎನ್ನುವ ಬೇಡಿಕೆ ಬಗ್ಗೆಯೂ ಪರಿಶೀಲಿಸುತ್ತೇನೆ.

ಬಡ್ತಿಯಲ್ಲೂ ಮೀಸಲಾತಿ ತಂದಿದ್ದು ನಾವು ಮಾತ್ರ.‌ ಪಿಟಿಸಿಎಲ್ ಕಾಯ್ದೆ ಮಾಡಿದ್ದು ನಾವು. ಹೊಸದಾಗಿ ಕೈಗಾರಿಕೆ ಆರಂಭಿಸುವವರಿಗೆ ಸಾಕಷ್ಟು ಸವಲತ್ತುಗಳನ್ನು ಕಲ್ಪಿಸಿದ್ದೇವೆ. ಇಡೀ ದೇಶಕ್ಕೆ ಮಾದರಿಯಾದ ಕಾಯ್ದೆ, ಕಾನೂನು, ನಿಯಮಗಳನ್ನು ಮಾಡಿರುವ ದಾಖಲೆ ನಮ್ಮ ಸರ್ಕಾರದ್ದಾಗಿದೆ ಎಂದರು.

 

 

WhatsApp Group Join Now
Telegram Group Join Now
Share This Article
error: Content is protected !!