ಬಸ್ ಟಿಕೆಟ್ ದರ ಏರಿಕೆ : ರಾಜ್ಯ ಸರ್ಕಾರದ ಬಿ.ವೈ.ವಿಜಯೇಂದ್ರ ಆಕ್ರೋಶ 

Bharath Vaibhav
ಬಸ್ ಟಿಕೆಟ್ ದರ ಏರಿಕೆ : ರಾಜ್ಯ ಸರ್ಕಾರದ ಬಿ.ವೈ.ವಿಜಯೇಂದ್ರ ಆಕ್ರೋಶ 
BY VIJENDRA
WhatsApp Group Join Now
Telegram Group Join Now

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಂದು ನಡೆದ ವರ್ಷದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಶೇ.15ರಷ್ಟು ಬಸ್ ಪ್ರಯಾಣದ ಟಿಕೆಟ್ ದರ ಹೆಚ್ಚಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಈ ಕುರಿತು ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ವಿರೋಧಿಸಿದ್ದು, ಸಿಎಂ ಅವರೇ ಯಾವ ಮುಖವಿಟ್ಟುಕೊಂಡು ನೀವು ರಾಜ್ಯದ ಜನತೆಗೆ ಪಂಚಭಾಗ್ಯ ಯೋಜನೆಯನ್ನು ಕೊಟ್ಟಿದ್ದೇವೆ ಎಂದು ಜಂಬ ಕೊಚ್ಚಿಕೊಳ್ಳುತ್ತೀರಿ ಎಂದು ಪ್ರಶ್ನಿಸಿದ್ದಾರೆ.

ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ವಿಜಯೇಂದ್ರ, ಶಕ್ತಿ ಯೋಜನೆಗೆ ಹಣ ಒದಗಿಸಲು ವಿಫಲವಾಗಿರುವ ನೀವು ಸಾರಿಗೆ ಸಂಸ್ಥೆಯು ನಷ್ಟದ ಹಾದಿಯನ್ನು ತುಳಿಯಲು ಕಾರಣರಾಗಿದ್ದೀರಿ. “ಮಹಿಳೆಯರಿಗೆ ಉಚಿತ ಪುರುಷರಿಗೆ ಅದರ ಹೊರೆ ಖಚಿತ” ಎಂಬುವುದನ್ನು ಇದೀಗ ಶೇ.15ರಷ್ಟು ಬಸ್ ಪ್ರಯಾಣ ದರ ಏರಿಸುವ ಮೂಲಕ ಸಾರಿಗೆ ವ್ಯವಸ್ಥೆ ಆಶ್ರಯಿಸಿರುವ ಜನರಿಗೆ ಬರೆ ಎಳೆದಿದ್ದೀರಿ.

ಶಕ್ತಿ ಯೋಜನೆ ಹೇಗಾಗಿದೆ ಎಂದರೆ ‘ವಾಣಿಜ್ಯ ಉತ್ಪನ್ನಗಳ ಮಾರಾಟದ ಆಕರ್ಷಣೆಗೆ ಮಳಿಗೆಗಳಲ್ಲಿ ಒಂದು ಖರೀದಿಸಿದರೆ-ಒಂದು ಉಚಿತ ಬೋರ್ಡ್ ಪ್ರದರ್ಶಿಸುವ ಮಾದರಿಯಲ್ಲಿ ರಾಜ್ಯದ ಜನರಿಗೆ ಟೋಪಿ ಹಾಕಲು ಹೊರಟಿದ್ದೀರಿ.

ಶೇ.15 ರಷ್ಟು ಸಾರಿಗೆ ದರ ಹೆಚ್ಚಳದ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಧಾರ ಅವೈಜ್ಞಾನಿಕ ಹಾಗೂ ಜನವಿರೋಧಿಯಾಗಿದೆ. ಇದನ್ನು ವಿರೋಧಿಸಿ ರಾಜ್ಯ ಬಿಜೆಪಿಯು ಜನರ ಪರ ಧ್ವನಿ ಎತ್ತಲಿದೆ ಎಂದು ಪ್ರತಿಭಟನೆಯ ಎಚ್ಚರಿಕೆ ನೀಡಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!