ಉಡುಪಿ : ಭ್ರಷ್ಟ ಕಾಂಗ್ರೆಸ್ ಸರ್ಕಾರ ಮತ್ತು ಕಾಂಗ್ರೆಸ್ ನ ಪುಡಾರಿಗಳಿಗೆ ಬಡ್ಡಿ ಸಮೇತ ಉತ್ತರ ಕೊಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಗುಡುಗಿದರು.
ನಿರಂತರವಾಗಿ ಬೆಲೆ ಏರಿಕೆಯನ್ನು ಖಂಡಿಸಿ ಸರ್ಕಾರದ ವಿರುದ್ಧ ನಡೆಯುತ್ತಿರುವ ಜನಾಕ್ರೋಶ ಯಾತ್ರೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಜನಪ್ರಿಯ ಸರ್ಕಾರವಿಲ್ಲ, ಕೇವಲ ಜಾಹೀರಾತಿನ ಸರ್ಕಾರವಿದ್ದು, ಬಡವರ ಪರ ಒಂದೂ ಕೆಲಸ ಮಾಡದ ಈ ಭ್ರಷ್ಟ ಸರ್ಕಾರದ ಅಭಿವೃದ್ಧಿ ಮಾತ್ರ ಶೂನ್ಯವಾಗಿದೆ ಎಂದು ವಾಗ್ದಾಳಿ ನಡೆಸಿದರು.
ಸರ್ಕಾರದ ಗೂಂಡಾಗಿರಿ ಹೆಚ್ಚು ದಿನ ನಡೆಯಲ್ಲ. ಅಲ್ಲದೇ ಬಡ್ಡಿ ಸಮೇತ ಕಾಂಗ್ರೆಸ್ ಪುಡಾರಿಗಳಿಗೆ ಉತ್ತರ ನೀಡುವ ಕಾಲ ಬಂದಿದೆ. 2028ರ ಚುನಾವಣೆ ಯಾವುದೇ ಸಂದರ್ಭದಲ್ಲಿ ಬರಬಹುದು. ಹೀಗಾಗಿ ಜನವಿರೋಧಿ ಸರ್ಕಾರವನ್ನು ಕೆಳಗಿಳಿಸಬೇಕು ಎಂದು ಕರೆ ನೀಡಿದರು.
ಇನ್ನು ರಾಜ್ಯದಲ್ಲಿ ಸಚಿವರು ಪೈಪೋಟಿಗೆ ಬಿದ್ದಂತೆ ಭ್ರಷ್ಟಚಾರದಲ್ಲಿ ತೊಡಗಿದ್ದಾರೆ. ಗಾಳಿಯೊಂದನ್ನು ಹೊರತುಪಡಿಸಿ ಎಲ್ಲದರ ಮೇಲೂ ಬೆಲೆ ಏರಿಕೆ ಮಾಡಲಾಗಿದೆ ಎಂದು ಇದೇ ವೇಳೆ ಮಾಜಿ ಸಚಿವ ಬಿ.ಶ್ರೀರಾಮುಲು ಅವರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.