Ad imageAd image

ಸರ್ಕಾರಿ ಸಾರಿಗೆ ನೌಕರರ ಮುಷ್ಕರಕ್ಕೆ ಕೂಡಲೇ ಪರಿಹಾರ: ಬಿ.ವೈ.ವಿಜಯೇಂದ್ರ ಆಗ್ರಹ

Bharath Vaibhav
ಸರ್ಕಾರಿ ಸಾರಿಗೆ ನೌಕರರ ಮುಷ್ಕರಕ್ಕೆ ಕೂಡಲೇ ಪರಿಹಾರ: ಬಿ.ವೈ.ವಿಜಯೇಂದ್ರ ಆಗ್ರಹ
WhatsApp Group Join Now
Telegram Group Join Now

ಬೆಂಗಳೂರು : ಸರ್ಕಾರಿ ಸಾರಿಗೆ ನೌಕರರ ಮುಷ್ಕರಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಕೂಡಲೇ ಪರಿಹಾರ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.

ಈ ಕುರಿತು ಇಂದು(ಮಂಗಳವಾರ) ಮಾಧ್ಯಮಗಳ ಜೊತೆಗೆ ಬಿ ವೈ ವಿಜಯೇಂದ್ರ ಅವರು ಮಾತನಾಡಿ, ಮುಷ್ಕರದಿಂದ ಬಸ್‌ ಸಿಗದೇ ಗ್ರಾಮೀಣ ಭಾಗದಲ್ಲಿ ಶಾಲಾ ಮಕ್ಕಳಿಗೆ ತೀವ್ರ ಸಮಸ್ಯೆ ಆಗಿದೆ.
ಸರಕಾರಿ ಬಸ್ಸಿಲ್ಲದ ಕಾಲೇಜು, ಶಾಲಾ ವಿದ್ಯಾರ್ಥಿಗಳು ಪರದಾಡುತ್ತಿದ್ದಾರ . ಗ್ಯಾರಂಟಿ ಕಾರಣಕ್ಕಾಗಿ ಗ್ರಾಮೀಣ ಭಾಗದ ಬಸ್ ಓಡಾಟವನ್ನು ಕಡಿತಗೊಳಿಸಿದ್ದಾರೆ ಎಂದು ಬಿ ವೈ ವಿಜಯೇಂದ್ರ ಅವರು ಆಕ್ಷೇಪಿಸಿದರು.

ಕೆಎಸ್‌ಆಗ್ನಿಸಿ ಮತ್ತಿತರ ಸಾರಿಗೆ ಸಂಸ್ಥೆಗಳ ನೌಕರರಿಗೆ ವೇತನ ಕೊಡಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಬಹಳ ತಿಂಗಳುಗಳಿಂದ ಆರ್ಥಿಕ ಮುಗ್ಗಟ್ಟು ಇದ್ದು, ಸಮಸ್ಯೆ ಉಲ್ಬಣವಾಗಿದೆ. ಹಾಗಾಗಿ ಅವರ ಬೇಡಿಕೆ ಈಡೇರಿಸಲು ಮುಖ್ಯಮಂತ್ರಿಗಳಿಗೆ ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದರು.

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಡ ಮಾಡದೇ, ತಕ್ಷಣವೇ ಕಾರ್ಮಿಕರ ಮತ್ತು ಅಧಿಕಾರಿಗಳ ಸಭೆ ಕರೆಯಬೇಕು. ಅವರ ಸಮಸ್ಯೆಗೆ ಪರಿಹಾರ ನೀಡಬೇಕು. ಜನಸಾಮಾನ್ಯರಿಗೆ ತೊಂದರೆ ಆಗುವುದನ್ನು ತಪ್ಪಿಸಬೇಕು ಎಂದು ಒತ್ತಾಯಿಸಿದರು. ಇದು ಮುಖ್ಯಮಂತ್ರಿಗಳ ಕರ್ತವ್ಯ. ಸಾರಿಗೆ ಸಚಿವರೂ ಕುಳಿತು ಸಮಸ್ಯೆಗೆ ಪರಿಹಾರ ನೀಡಬೇಕೆಂದು ಆಗ್ರಹವನ್ನು ಮುಂದಿಟ್ಟರು. ರಾಹುಲ್ ಗಾಂಧಿಯವರ ಬೆಂಗಳೂರು ಭೇಟಿ ಕಾರಣಕ್ಕಾಗಿ ಮುಖ್ಯಮಂತ್ರಿಗಳು ನಿನ್ನ ಸಾರಿಗೆ ನೌಕರರ ಸಭೆ ಕರೆದಿದ್ದರು ಎಂದೂ ಅವರು ಆರೋಪಿಸಿದರು.

ಏನು ಪರ್ಯಾಯ ವ್ಯವಸ್ಥೆ ಮಾಡಿದ್ದಾರೆ? ನಿನ್ನೆ ಸುತ್ತೋಲೆಯನ್ನೂ ಹೊರಡಿಸಿದ್ದಾರೆ. ಖಾಸಗಿ ಶಿಕ್ಷಣ ಸಂಸ್ಥೆಗಳ ಬಸ್‌ಗಳೂ ಬೇಕೆಂದು ನಿನ್ನೆ ಪತ್ರ ಬರೆದಿದ್ದಾರೆ. ಮೊದಲೇ ವ್ಯವಸ್ಥೆ ಹಾಳು ಮಾಡಲು ಹೊರಟಿದ್ದಾರ. ಈಗ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲೂ ಸಮಸ್ಯೆ ಹುಟ್ಟಿಸಲು ಹೊರಟಿದ್ದೀರಿ ಎಂದು ಅವರು ಈ ಕುರಿತ ಪ್ರಶ್ನೆಗೆ ಉತ್ತರ ನೀಡಿದರು.

ಗಡಕ್ಕೆ ಬೆಂಕಿ ಹತ್ತಿಕೊಂಡಾಗ ಸಮಸ್ಯೆ ಪರಿಹರಿಸಲು ಹೊರಟಿದ್ದಾರ. ಈಗಲೂ ಕಾಲ ಮಿಂಚಿಲ್ಲ. ಮುಷ್ಕರ ಈಗಾಗಲೇ ಪ್ರಾರಂಭವಾಗಿದೆ. ಸಂಬಂಧಿತರನ್ನು ಕರೆದು ಸಮಸ್ಯೆ ಪರಿಹರಿಸಬೇಕು ಎಂದು ಅವರು ತಿಳಿಸಿದರು. ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಉಪ ಮುಖ್ಯಮಂತ್ರಿ ಮತ್ತು ಶಾಸಕ ಡಾ.ಸಿ.ಎನ್. ಅಶ್ವತ್ಥನಾರಾಯಣ್ ಅವರು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!