ತುಮಕೂರು: ರಾಜ್ಯ ಸರಕಾರದ ಕೃಷಿ ಸಚಿವರ ಅವಿವೇಕತನದಿಂದ ರೈತರು ರಸಗೊಬ್ಬರಕ್ಕಾಗಿ ಹೋರಾಟ ಮಾಡುವ ಸ್ಥಿತಿ ಬಂದಿದೆ. ರೈತಪರವಾಗಿ ಬಿಜೆಪಿ ಹೋರಾಟ ಮಾಡುತ್ತಿದೆ ಎಂದು ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.
ರೈತರಿಗೆ ರಸಗೊಬ್ಬರ ಪೂರೈಕೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯದ ವಿರುದ್ಧ ಇಂದು ಇಲ್ಲಿ ಬಿಜೆಪಿ ಹಾಗೂ ರೈತ ಮೋರ್ಚಾದ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಬಿ.ವೈ.ವಿಜಯೇಂದ್ರ ಅವರು, ರೈತರ ಕಣ್ಣೀರು ಒರೆಸಲು ಈ ಹೋರಾಟ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ರೈತರ ಕಣ್ಣೀರು ಒರೆಸದ ಸರಕಾರಕ್ಕೆ ರಾಜ್ಯದಲ್ಲಿ ಉಳಿದಿಲ್ಲ ಎಂದು ಅವರು ಎಚ್ಚರಿಸಿದರು. ರೈತರ ಕಣ್ಣಲ್ಲಿ ನೀರು ಬರಿಸಿದರೆ ಆ ಮುಖ್ಯಮಂತ್ರಿಗಳಿಗೆ ಒಳ್ಳೆಯದಾಗಿಲ್ಲ. ರೈತರನ್ನು ದುಸ್ಥಿತಿಗೆ ತಂದ ಕೃಷಿ ಸಚಿವರಿಗೂ ಒಳ್ಳೆಯದಾಗದು ಎಂದು ನುಡಿದರು. ಹವಾಮಾನ ಇಲಾಖೆಯಿಂದ ಸಾಕಷ್ಟು ಮಳೆಯ ಮುನ್ಸೂಚನೆ ಇದ್ದರೂ ಮುಖ್ಯಮಂತ್ರಿಗಳು ಕಣ್ಮುಚ್ಚಿ ಕುಳಿತಿದ್ದರು ಎಂದು ಟೀಕಿಸಿದರು.