Ad imageAd image
- Advertisement -  - Advertisement -  - Advertisement - 

ಬೈಲಹೊಂಗಲ : ಬಸ್ ನಿಲ್ಲಿಸಲ್ಲ ವೆಂದು ಡ್ರೈವರ್ – ಕಂಡಕ್ಟರ್ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ 

Bharath Vaibhav
ಬೈಲಹೊಂಗಲ : ಬಸ್ ನಿಲ್ಲಿಸಲ್ಲ ವೆಂದು ಡ್ರೈವರ್ – ಕಂಡಕ್ಟರ್ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ 
WhatsApp Group Join Now
Telegram Group Join Now

ಬೆಳಗಾವಿ: ಬಸ್ ನಿಲ್ಲಿಸಿಲ್ಲ ಎಂದು ಸರ್ಕಾರಿ ಬಸ್ ನಿರ್ವಾಹಕ ಮತ್ತು ಚಾಲಕನ ಮೇಲೆ ಮುಸ್ಲಿಂ ಯುವಕರ ಗುಂಪೊಂದು ಹಲ್ಲೆ ನಡೆಸಿದ ಘಟನೆ ಬೈಲಹೊಂಗಲ ಬಸ್ ನಿಲ್ದಾಣದಲ್ಲಿ ನಡೆದಿದೆ.

ಇನ್ನು ಈ ಬಸ್​ ಬೈಲಹೊಂಗಲದಿಂದ ಧಾರವಾಡಕ್ಕೆ ಹೊರಟ್ಟಿತ್ತು. ಈ ವೇಳೆ ಓಡಿ ಬಂದು ಬಸ್ ಹತ್ತಲು ಮಹಿಳೆ ಯತ್ನಿಸಿದ್ದಾರೆ. ಆಗ ಮಹಿಳೆಗೆ ನಿರ್ವಾಹಕ ಬೈಯ್ದಿದ್ದಾರೆ ಎಂದು ಆರೋಪಿಸಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಇನ್ನು ಈ ವೇಳೆ ಜಗಳ ಬಿಡಿಸಲು ಬಂದ ಚಾಲಕರ ಮೇಲೆಯೂ ಹಲ್ಲೆ ಮಾಡಿದ ಯುವಕರು, ಬಸ್ ನಿಲ್ದಾಣದಲ್ಲಿದ್ದ ಕಂಟ್ರೋಲರ್ ಕೊಠಡಿಗೆ ನುಗ್ಗಿ ಗಲಾಟೆ ಮಾಡಿದ್ದಾರೆ.

ಬಳಿಕ ರೊಚ್ಚಿಗೆದ್ದ ಚಾಲಕರು ಮತ್ತು ನಿರ್ವಾಹಕರು ಬೈಲಹೊಂಗಲ ಬಸ್ ನಿಲ್ದಾಣದಿಂದ ಹೊರಡುವ ಬಸ್​ಗಳನ್ನ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದ್ದಾರೆ.

ನಂತರ ಬೈಲಹೊಂಗಲ ಪೊಲೀಸ್ ಠಾಣೆ ಬಳಿ ಜಮಾವಣೆಯಾದ ಅವರು, ಹಲ್ಲೆ ಮಾಡಿದವರನ್ನ ಕೂಡಲೇ ಬಂಧಿಸಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

WhatsApp Group Join Now
Telegram Group Join Now
Share This Article
error: Content is protected !!