ಬೆಳಗಾವಿ: ಇಂಜನೀಯರಿಂಗ್ ವಿದ್ಯಾರ್ಥಿಯೋರ್ವ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಧರ್ಮನಾಥ ಭವನ ಬಳಿಯ ಚಂದ್ರಕಾಂತ ಕಾಗವಾಡ ಅವರ ಹುಡುಗರ ಹಾಸ್ಟೇಲ್ ನಲ್ಲಿ ನಡೆದಿದೆ.
ಪ್ರಜ್ವಲ್ ಕುಪ್ಪಾನಟ್ಟಿ (20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯಾಗಿದ್ದು, ಈತ ರಾಯಬಾಗ ತಾಲೂಕು ಭಾಂವನ ಸವದತ್ತಿ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ. ಎಂದಿನಂತೆ ಸೋಮವಾರ ಕಾಲೇಜಿಗೆ ಹೋಗಬೇಕಾದ ವಿದ್ಯಾರ್ಥಿ ಕಾಲೇಜಿಗೆ ಹೋಗದೇ ಹಾಸ್ಟೇಲ್ ನಲ್ಲಿಯೇ ಇದ್ದು, ನೇಣು ಹಾಕಿಕೊಂಡಿರುವುದು ಸಂಜೆ ಗೊತ್ತಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮಾಳ ಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.