Ad imageAd image

ನ. 20ರಂದು ರಾಜ್ಯಾದ್ಯಂತ ಮದ್ಯದಂಗಡಿ ಬಂದ್ ಗೆ ಕರೆ

Bharath Vaibhav
ನ. 20ರಂದು ರಾಜ್ಯಾದ್ಯಂತ ಮದ್ಯದಂಗಡಿ ಬಂದ್ ಗೆ ಕರೆ
WhatsApp Group Join Now
Telegram Group Join Now

ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮದ್ಯದಂಗಡಿ ಮಾಲೀಕರು ಪ್ರತಿಭಟನೆಗೆ ಮುಂದಾಗಿದ್ದು, ನವೆಂಬರ್ 20ರಂದು ಮದ್ಯದಂಗಡಿ ಬಂದ್ ಗೆ ಕರೆ ನೀಡಿದ್ದಾರೆ.

ಈ ಹಿನ್ನೆಲೆ ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಮದ್ಯ ಮಾರಾಟಗಾರರ ಜೊತೆ ಆರ್ಥಿಕ ಇಲಾಖೆ ಕಾರ್ಯದರ್ಶಿ ಪಿಸಿ ಜಾಫರ್ ಸಭೆ ನಡೆಸಿದ್ದಾರೆ.ಸಭೆ ಬಳಿಕ ಮದ್ಯ ಮಾರಾಟಗಾರರ ಅಧ್ಯಕ್ಷ ಗುರುಸ್ವಾಮಿ ಮಾತನಾಡಿದ್ದಾರೆ.

ನಾವು ಚರ್ಚೆ ಬಳಿಕ ಸಭೆ ಮಾಡಿದ್ದೇವೆ. ಸಿಎಂ ಜೊತೆ ಕೂಡ ಸಭೆ ಮಾಡುತ್ತೇವೆ, ನವೆಂಬರ್ 20 ರಂದು ಮದ್ಯ ಮಾರಾಟ ಬಂದ್ ಆಗಲಿದೆ . ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದರು.

ಅಬಕಾರಿ ಇಲಾಖೆಯಲ್ಲಿ ಭಾರಿ ಭ್ರಷ್ಟಾಚಾರ ನಡೆಯುತ್ತಿದ್ದು, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ವಿರುದ್ಧ ಮದ್ಯದಂಗಡಿ ಮಾಲೀಕರು ತಿರುಗಿ ಬಿದ್ದಿದ್ದಾರೆ. ಅಬಕಾರಿ ಇಲಾಖೆ ಅಧಿಕಾರಿಗಳ ವರ್ಗಾವಣೆ, ಪ್ರಮೋಷನ್ ಗಾಗಿ ಹಣ ಸಂಗ್ರಹ ಮಾಡುತ್ತಿದ್ದಾರೆ.

ಇಲಾಖೆ ಸಚಿವರ ಬದಲಿಸಬೇಕು. ಹಾಗೂ ಭ್ರಷ್ಟಾಚಾರ ತಡೆಗಟ್ಟುವತೆ ಆಗ್ರಹಸಿ ಮದ್ಯದಂಗಡಿ ಮಾಲೀಕರು ಪ್ರತಿಭಟನೆ ನಡೆಸುತ್ತಿದ್ದಾರೆ. ನ.20ರಂದು ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್ ಗೆ ಕರೆ ನೀಡಿದ್ದಾರೆ.ಅಬಕಾರಿ ಇಲಾಖೆಯಲ್ಲಿ ಭಾರಿ ಭ್ರಷ್ಟಾಚಾರ ನಡೆಯುತ್ತಿದೆ. ಸಚಿವರನ್ನು ಬದಲಿಸುವಂತೆ ಒತ್ತಾಯಿಸಿ ಮದ್ಯದಂಗಡಿ ಮಾಲೀಕರು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!