ನಿಪ್ಪಾಣಿ : ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ನಿಪ್ಪಾಣಿ ವಿಧಾನಸಭೆ ಕ್ಷೇತ್ರದ ಬಾರವಾಡ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಅವರ ಪರವಾಗಿ ಮಾಜಿ ಸಚಿವರು ಹಾಗೂ ನಿಪ್ಪಾಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸೌ. ಶಶಿಕಲಾ ಜೊಲ್ಲೆಯವರು ಪ್ರಚಾರ ಸಭೆ ಕೈಗೊಂಡು ಮತಯಾಚನೆ ಮಾಡಿದರು.
ಕೇಂದ್ರ ಸರ್ಕಾರ ಜನರ ಒಳಿತಿಗಾಗಿ ರೂಪಿಸಿರುವ ಹಲವಾರು ಯೋಜನೆಗಳನ್ನು ಜನರಿಗೆ ತಿಳಿಸಿ ಮತ್ತೊಮ್ಮೆ ಸನ್ಮಾನ್ಯ ಶ್ರೀ ನರೇಂದ್ರ ಮೋದಿ ಜಿ ಯವರನ್ನು ಈ ದೇಶದ ಪ್ರಧಾನಿಯನ್ನಾಗಿ ಆರಿಸುವ ಸಂಕಲ್ಪ ಮಾಡಿ ಬಿಜೆಪಿ ಅಭ್ಯರ್ಥಿಯಾದ ಶ್ರೀ ಅಣ್ಣಾಸಾಹೇಬ ಜೊಲ್ಲೆ ಗೆ ತಮ್ಮ ಅಮೂಲ್ಯ ಮತ ನೀಡಿ ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಗಣ್ಯರು,ಪಕ್ಷದ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ : ರಾಜು ಮುಂಡೆ