Ad imageAd image

ಕೇಕ್‌ಗೆ ಬಳಸುವ ಪದಾರ್ಥಗಳಲ್ಲೂ ಕ್ಯಾನ್ಸರ್​​ಕಾರಕ ಅಂಶ ಪತ್ತೆ 

Bharath Vaibhav
ಕೇಕ್‌ಗೆ ಬಳಸುವ ಪದಾರ್ಥಗಳಲ್ಲೂ ಕ್ಯಾನ್ಸರ್​​ಕಾರಕ ಅಂಶ ಪತ್ತೆ 
WhatsApp Group Join Now
Telegram Group Join Now

ಬೆಂಗಳೂರು : ಗೋಬಿ, ಕಬಾಬ್​, ಪಾನಿಪುರಿ ಆಯ್ತು ಇದೀಗ, ಕೇಕ್‌ಗೆ ಬಳಸುವ ಪದಾರ್ಥಗಳಲ್ಲೂ ಕ್ಯಾನ್ಸರ್​​ಕಾರಕ ಅಂಶ ಪತ್ತೆಯಾಗಿದೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ತಿಳಿಸಿದೆ.

ಕೇಕ್​​ಗೆ ಬಳಸುವ ಪದಾರ್ಥಗಳು ಕಲಬರಿಕೆಯಿಂದ ಕೂಡಿವೆ ಎಂಬ ಅನುಮಾನ ವ್ಯಕ್ತವಾದ ಹಿನ್ನೆಲೆಯಲ್ಲಿ ಆಹಾರ ಇಲಾಖೆ ಅಧಿಕಾರಿಗಳು ಕೇಕ್​ ಮಾದರಿಗಳನ್ನು ಸಂಗ್ರಹಿಸಿದರು.ಪರಿಶೀಲನೆಗೆ ಒಳಪಡಿಸಿದಾಗ 12 ಮಾದರಿ ಕೇಕ್​ಗಳಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗಿವೆ.

ರೆಡ್ ವೆಲ್ವೆಟ್ ಹಾಗೂ ಬ್ಲಾಕ್ ಫಾರೆಸ್ಟ್ ಕೇಕ್​ನಲ್ಲಿ ಹೆಚ್ಚು ಬಣ್ಣ ಬಳಕೆ ಮಾಡುವುದರಿಂದ, ಇದು ಮನುಷ್ಯನ ಆರೋಗ್ಯಕ್ಕೆ ಹಾನಿ ಉಂಟು ಮಾಡುತ್ತದೆ. ರುಚಿ ಎನಿಸುವ ಕೇಕ್ ತಿನ್ನುವ ಮುನ್ನ ಎಚ್ಚರಿಕೆ ವಹಿಸಬೇಕಿದೆ. ಈ ಕೃತಕ ಬಣ್ಣಗಳಿಂದ ಆರೋಗ್ಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಹೀಗಾಗಿ ರೆಡ್ ವೆಲ್ವೆಟ್ ಹಾಗೂ ಬ್ಲಾಕ್ ಫಾರೆಸ್ಟ್ ಕೇಕ್​ಗೆ ಬಣ್ಣ ಬಳಕೆಗೆ ನಿರ್ಬಂಧಿಸಲಾಗಿದೆ. ಆಹಾರ ಸುರಕ್ಷತಾ ಇಲಾಖೆಯ ಸೂಚನೆ ಪಾಲಿಸುವಂತೆ ಕೇಕ್ ತಯಾರಿಕರಿಗೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!