Ad imageAd image

ಒಂದು ಕೋಮಿನ ಬಗ್ಗೆ ವಿವಾದಾತ್ಮಕ ಹೇಳಿಕೆ: ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಪ್ರಕರಣ ದಾಖಲು

Bharath Vaibhav
ಒಂದು ಕೋಮಿನ ಬಗ್ಗೆ ವಿವಾದಾತ್ಮಕ ಹೇಳಿಕೆ: ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಪ್ರಕರಣ ದಾಖಲು
WhatsApp Group Join Now
Telegram Group Join Now

ಗುರುಮಠಕಲ್ :ಪಟ್ಟಣದಲ್ಲಿ ನಡೆದ ಛತ್ರಪತಿ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಭಾಷಣದ ವೇಳೆ ಕೋಮಿನ ಕುರಿತು ಮಾಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.

ಕಾರ್ಯಕ್ರಮದಲ್ಲಿ ಮಾತನಾಡುವ ವೇಳೆ ಒಂದು ಕೋಮಿನ ಭಾಷೆ ಹಾಗೂ ಸಂಸ್ಕೃತಿಗೆ ಸಂಬಂಧಿಸಿದಂತೆ ಮಾಡಿದ ಮಾತುಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದು, ಹಲವರಿಂದ ಆಕ್ಷೇಪ ವ್ಯಕ್ತವಾಗಿದೆ.

ಈ ಹಿನ್ನೆಲೆಯಲ್ಲಿ ನೀಡಲಾದ ದೂರಿನ ಆಧಾರದಲ್ಲಿ ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಾಸಕರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS)ಯ ಸೆಕ್ಷನ್ 196, 299, 302, 352 ಹಾಗೂ 353 ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ಪೊಲೀಸ್ ಇಲಾಖೆ ಮಾಹಿತಿ ನೀಡಿದರು.

ವರದಿ : ರವಿ ಬುರನೋಳ್

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!