ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣಗೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗಿದೆ. ಪ್ರಜ್ವಲ್ ವಿರುದ್ಧ 2ನೇ ಎಫ್ ಐ ಆರ್ ನಲ್ಲಿ ವಿವಿಧ ಸೆಕ್ಷನ್ ಗಳ ಅಡಿ ಎಸ್ ಐಟಿ ಕೇಸ್ ಗಳನ್ನು ದಾಖಲಿಸಿದೆ.
ಐಪಿಸಿ ಸೆಕ್ಷನ್ 376 (2)(N) ಮಹಿಳೆಯ ಮೇಲೆ ನಿರಂತರ ಅತ್ಯಾಚಾರ ಕೇಸ್ ದಾಖಲಿಸಲಾಗಿದೆ.ಈ ಪ್ರಕರಣ ಸಾಬೀತಾದರೆ ಕನಿಷ್ಠ 10 ವರ್ಷ, ಗರಿಷ್ಠ ಜೀವಾವಧಿ ಶಿಕ್ಷೆ ವಿಧಿಸಬಹುದಾಗಿದೆ.
ಐಪಿಸಿ ಸೆಕ್ಷನ್ 506 – ಅಪರಾಧಿಕ ಉದ್ದೇಶದಿಂದ ಕೃತ್ಯ ಈ ಪ್ರಕರಣ ಸಾಬೀತಾದರೆ ಕನಿಷ್ಠ 2 ವರ್ಷ ಜೈಲು ಶಿಕ್ಷೆ, ದಂಡ ವಿಧಿಸಬಹುದು.ಐಪಿಸಿ ಸೆಕ್ಷನ್ 354a1 – ಲೈಂಗಿಕ ಬೇಡಿಕೆಗೆ ಒತ್ತಾಯಿಸುವುದು. ಅಪರಾಧಿಗೆ ಗರಿಷ್ಠ ಮೂರು ವರ್ಷ ಜೈಲು ಶಿಕ್ಷೆ ವಿಧಿಸಬಹುದು.
ಐಪಿಸಿ ಸೆಕ್ಷನ್ 354b, 354c ಮಹಿಳೆಯ ಖಾಸಗಿ ವಿಡಿಯೋ ರೆಕಾರ್ಡ್ ಹಾಗೂ ಐಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ಎಸ್ ಐಟಿ ತನಿಖೆ ಚುರುಕುಗೊಳಿಸಿದ್ದು, ಪ್ರಜ್ವಲ್ ರೇವಣ್ಣ ವಿದೇಶದಿಂದ ಆಗಮಿಸುತ್ತಿದ್ದಂತೆ ಬಂಧಿಸಲು ಸಿದ್ಧತೆ ನಡೆಸಲಾಗಿದೆ.