ಬೆಂಗಳೂರು : ರಾಜ್ಯ ಸರ್ಕಾರ ಎಸ್ ಎಸ್ ಎಲ್ ಸಿ (SSLC) ಟಾಪರ್ ಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ., ಇನ್ಮುಂದೆ ಎಸ್ ಎಸ್ ಎಲ್ ಸಿ ಟಾಪರ್ ಗಳಿಗೆ ಲ್ಯಾಪ್ ಟಾಪ್ ನೀಡುವ ಬದಲು ನಗದು ಬಹುಮಾನ ನೀಡಲು ನಿರ್ಧರಿಸಿದೆ.
ಪ್ರತಿ ಜಿಲ್ಲೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಟಾಪ್ -೩ ವಿದ್ಯಾರ್ಥಿಗಳ ಆಧಾರ್ ಲಿಂಕ್ ಆದ ಖಾತೆಗೆ ನೇರ ಹಣ ವರ್ಗಾವಣೆ ಮಾಡಲು ಚಿಂತನೆ ನಡೆಸಲಾಗಿದೆ.ಪ್ರತಿ ವಿದ್ಯಾರ್ಥಿಗೆ 50,000 ರೂ ನಗದು ಜಮಾ ಆಗಲಿದೆ.
೨೦೨೪-೨೫ ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ರಾಜ್ಯದ ೭೫೮ ವಿದ್ಯಾರ್ಥಿಗಳು ನಗದು ಬಹುಮಾನಕ್ಕೆ ಆಯ್ಕೆ ಆಗಿದ್ದಾರೆ.
ಲ್ಯಾಪ್ ಟಾಪ್ ಬದಲು ಹಣ ನೀಡುವುದರಿಂದ ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರಯೋಜನ ಸಿಗಲಿದೆ . ಹಣ ತಮ್ಮ ಮುಂದಿನ ಶಿಕ್ಷಣಕ್ಕೆ ಸಹಕಾರಿಯಾಗುವ ನಿಟ್ಟಿನಲ್ಲಿ ಚಿಂತನೆ ನಡೆಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.




