Ad imageAd image

ಯಾರ ಓಲೈಕೆಗೆ ಜಾತಿ ಗಣತಿ : ಕುಮಾರಸ್ವಾಮಿ ತೀವ್ರ ಆಕ್ರೋಶ

Bharath Vaibhav
ಯಾರ ಓಲೈಕೆಗೆ ಜಾತಿ ಗಣತಿ : ಕುಮಾರಸ್ವಾಮಿ ತೀವ್ರ ಆಕ್ರೋಶ
HDK
WhatsApp Group Join Now
Telegram Group Join Now

ಬೆಂಗಳೂರು : ಜಾತಿ ಗಣತಿ ವರದಿಯ ವಿರುದ್ಧ ವಿಪಕ್ಷಗಳು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದು, ಇದರ ನಡುವೆಯೇ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ಜಾತಿ ಗಣತಿ ಗಜಪ್ರಸವ ತಥಂಗಕ್ಕೆ ಸಂಪುಟದಲ್ಲಿ ಶಾಸ್ತ್ರೋಕ್ತವಾಗಿ ಅರಿಶಿಣ ಕಂಕುಮ ಹಚ್ಚಿ ಕಡ್ಡಿ ಹಚ್ಚಲಾಗಿದೆ ಕಿಡಿಕಾರಿದ್ದಾರೆ.

ಈ ಬಗ್ಗೆ ಪೋಸ್ಟ್ ಮಾಡಿರುವ ಅವರು, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂ.ಗ್ರಾಮಾಂತರ, ತುಮಕೂರು, ಚಿತ್ರದುರ್ಗ ಸೇರಿ ಹಳೇ ಮೈಸೂರು ಜಿಲ್ಲೆಗಳಲ್ಲಿ ವಾಸಿಸುವ ಒಕ್ಕಲಿಗ ಸಮುದಾಯದ ಸಂಖ್ಯೆ ಎಷ್ಟು? ಎಂದು ಪ್ರಶ್ನಿಸಿದ್ದಾರೆ.

ಜಾತಿ ಗಣತಿ ಗಜಪ್ರಸವ ತಥಂಗಕ್ಕೆ ಸಂಪುಟದಲ್ಲಿ ಶಾಸ್ತ್ರೋಕ್ತವಾಗಿ ಅರಿಶಿಣ ಕಂಕುಮ ಹಚ್ಚಿ ಕಡ್ಡಿ ಹಚ್ಚಲಾಗಿದೆ. ಆ ವರದಿಯದ್ದು ಎನ್ನಲಾದ ಅಂಕಿ-ಅಂಶಗಳು ಎಲ್ಲೆಡೆ ತೇಲಾಡುತ್ತಿವೆ ಯಾವುದೋ ಅಜ್ಞಾತ ಕೈ ಅದನ್ನು ವ್ಯವಸ್ಥಿತವಾಗಿ ತೇಲಿಬಿಟ್ಟಿದೆ ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಒಕ್ಕಲಿಗ ಸಮಾಜಕ್ಕೆ ಸೇರಿದ ಅಂಕಿ-ಸಂಖ್ಯೆ ಅಷ್ಟೇ ಅಲ್ಲ, ವೀರಶೈವ ಲಿಂಗಾಯತ ಮತ್ತು ಇನ್ನಿತರೆ ಸಮಾಜಗಳ ಸಂಖ್ಯೆಯೂ ನನಗೆ ಅಚ್ಚರಿ ಹುಟ್ಟಿಸಿದೆ. ಜಾತಿಗಣತಿ ಗ್ಯಾರಂಟಿ ರಾಜ್ಯದಲ್ಲಿ ಅಲ್ಲೋಲಕಲ್ಲೋಲವೆಬ್ಬಿಸಲು ಹೂಡಿದ ಷಡ್ಯಂತ್ರ್ಯವೇ? ಅಥವಾ ಸರಣಿ ದರ ಏರಿಕೆ, ಸಾಲುಸಾಲು ಭ್ರಷ್ಟ ಹಗರಣಗಳ ಮುಜುಗರದಿಂದ ಮುಖ ಮುಚ್ಚಿಕೊಳ್ಳಲು ಜನರ ಗಮನ ಬೇರೆಡೆಗೆ ಹೊರಳಿಸಲು ರೂಪಿಸಿದ ಸಂಚೇ? ಎಂದು ಹೆಚ್ ಡಿಕೆ ಪ್ರಶ್ನಿಸಿದ್ದಾರೆ.

ಇಡೀ ರಾಜ್ಯವು ಜಾತಿ ಬೆಂಕಿಯಲ್ಲಿ ಹೊತ್ತಿ ಉರಿಯುತ್ತಿದ್ದರೆ, ಆದರೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಾತ್ರ ಈ ನಡೆ ಕೆಲ ನಿರ್ದಿಷ್ಟ ಸಮುದಾಯಗಳ ಮೇಲೆ ರಾಜಕೀಯ, ಸಾಮಾಜಿಕವಾಗಿ ಹಗೆತನ ಸಾಧಿಸುವ ಮುಂದುವರಿದ ಅಧ್ಯಾಯವೇ? ಮುಖ್ಯಮಂತ್ರಿ ಕುರ್ಚಿ ಹತ್ತಲು ಚಾತಕ ಪಕ್ಷಿಯಂತೆ ನಿದ್ದೆಗೆಟ್ಟು, ‘ಒಂದ್‌ ಸಲ ನಂಗೂ ಪೆನ್ನೂ-ಪೇಪರ್‌ ಕೊಡಿ’ ಎಂದು ಸಮುದಾಯದ ಮುಂದೆ ಮಂಡಿಯೂರಿ ಗೋಗರೆದ ವ್ಯಕ್ತಿ ಸಿದ್ದಷಡ್ಯಂತ್ರ್ಯ ವರದಿಗೆ ಶಿರಬಾಗಿ ಸಮ್ಮತಿಸಿಸುವರೇ..? ಎಂದು ಬರೆದುಕೊಂಡಿದ್ದಾರೆ.

ಪೆನ್ನೂ ಪೇಪರ್‌ ಕೊಟ್ಟ ಪಾಪಕ್ಕೆ ಒಕ್ಕಲಿಗ ಸಮಾಜ ಬೆಲೆ ತೆರುತ್ತಿದೆ. ಕುರ್ಚಿ ದುರಾಸೆಗೆ ಈ ವ್ಯಕ್ತಿ ಅದೇ ಪೆನ್ನಿನಲ್ಲಿ ಸಮಾಜದ ಮರಣಶಾಸನ ಬರೆಯುತ್ತಿದ್ದಾರೆ ಈ ವರದಿಗೆ ನನ್ನ ಒಪ್ಪಿಗೆ ಇಲ್ಲ. ಅನ್ಯಾಯದ ವಿರುದ್ಧ ಹೋರಾಟಕ್ಕೆ ನಾನು ಶತಸಿದ್ಧ ಎಂದು ಹೆಚ್ ಡಿಕೆ ಆಕ್ರೋಶ ಹೊರಹಾಕಿದ್ದಾರೆ.

WhatsApp Group Join Now
Telegram Group Join Now
Share This Article
error: Content is protected !!