ಲಖನೌ: ಸಂತ್ರಸ್ತೆಯ ಸ್ತನಗಳನ್ನು ಹಿಡಿಯುವುದು, ಆಕೆಯ ಪೈಜಾಮ ದಾರ ಅಥವಾ ಪ್ಯಾಂಟ್ ಎಳೆಯುವುದು ಅತ್ಯಾಚಾರ ಅಥವಾ ಅತ್ಯಾಚಾರ ಯತ್ನ ಆಗುವುದಿಲ್ಲ.. ಎಂದು ಅಲಹಾಬಾದ್ ಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಅತ್ಯಾಚಾರ ಯತ್ನಕ್ಕೆ ಸಂಬಂಧಿಸಿದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಕೋರ್ಟ್ ಈ ಮಹತ್ವದ ತೀರ್ಪು ನೀಡಿದ್ದು, ಸಂತ್ರಸ್ತೆಯ ಸ್ತನಗಳನ್ನು ಹಿಡಿಯುವುದು, ಆಕೆಯ ಪೈಜಾಮ ದಾರ ಅಥವಾ ಪ್ಯಾಂಟ್ ಎಳೆಯುವುದು ಅತ್ಯಾಚಾರ ಅಥವಾ ಅತ್ಯಾಚಾರ ಯತ್ನ ಆಗುವುದಿಲ್ಲ.. ಬದಲಿಗೆ ಅದು ತೀವ್ರ ಲೈಂಗಿಕ ದೌರ್ಜನ್ಯವಾಗುತ್ತದೆ ಎಂದು ಹೇಳಿದೆ.
ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯ ಪಟಿಯಾಲಿ ಪೊಲೀಸ್ ಠಾಣೆ ಪ್ರದೇಶಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ನ್ಯಾಯಮೂರ್ತಿ ರಾಮ್ ಮನೋಹರ್ ನಾರಾಯಣ್ ಮಿಶ್ರಾ ಅವರ ಪೀಠವು, ಸಂತ್ರಸ್ತೆಯ ಸ್ತನಗಳನ್ನು ಹಿಡಿಯುವುದು, ಆಕೆಯ ಪೈಜಾಮದ ದಾರವನ್ನು ಕತ್ತರಿಸಿ ಅದನ್ನು ಎಳೆಯಲು ಪ್ರಯತ್ನಿಸುವುದು ಅತ್ಯಾಚಾರ ಅಥವಾ ಅತ್ಯಾಚಾರ ಯತ್ನವಾಗುವುದಿಲ್ಲ. ಇದು ಗಂಭೀರ ಲೈಂಗಿಕ ದೌರ್ಜನ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟಿದೆ.