Ad imageAd image

ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಪತನ : ಸಿ. ಸಿ ಪಾಟೀಲ್ ಭವಿಷ್ಯ

Bharath Vaibhav
ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಪತನ : ಸಿ. ಸಿ ಪಾಟೀಲ್ ಭವಿಷ್ಯ
WhatsApp Group Join Now
Telegram Group Join Now

ಗದಗ: ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ. ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಮಾಜಿ ಸಚಿವ ಸಿ.ಸಿ.ಪಾಟೀಲ್ ಭವಿಷ್ಯ ನುಡಿದಿದ್ದಾರೆ.

ಗದಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿ.ಸಿ.ಪಾಟೀಲ್, ಹಲವು ಕಾಂಗ್ರೆಸ್ ನಾಯಕರು ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ.ಲೋಕಸಭಾ ಚುನಾವಣೆ ಬಳಿಕ ಸರ್ಕಾರ ಪತನವಾಗಲಿದೆ ಎಂದರು.

ರಾಜ್ಯದಲ್ಲಿ ಯಾವುದೇ ಕ್ಷಣದಲ್ಲಿ ವಿಧಾನಸಭೆಗೆ ಮಧ್ಯಂತರ ಚುನಾವಣೆ ನಡೆಯಲಿದೆ. ಚುನಾವಣೆ ಎದುರಿಸಲು ಬಿಜೆಪಿ ಸಿದ್ಧವಾಗಿದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಕೋವಿಶೀಲ್ಡ್ ಸೈಡ್ ಇಫೆಕ್ಟ್ ನಿಂದ ಸಾವುಗಳು ಸಂಭವಿಸುತ್ತಿದೆ ಎಂಬ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿಕೆಗೆ ಕಿಡಿಕಾರಿರುವ ಸಿ.ಸಿ.ಪಾಟೀಲ್, ಅಸಹಾಯಕನ ಕೊನೇ ಅಸ್ತ್ರ ಅಪಪ್ರಚಾರ.ಕೋವಿಶೀಲ್ಡ್ ಸೈಡ್ ಎಫೆಕ್ಟ್ ನಿಂದ ಸಾವಾಗುತ್ತಿದ್ದರೆ ಮಾಧ್ಯಮದವರು ಸುಮ್ಮನಿರುತ್ತಿದ್ದರೇ? ನಾನೂ ಕೂಡ 3 ಡೋಸ್ ಕೋವಿಶೀಲ್ಡ್ ಲಸಿಕೆ ಹಾಕಿಸಿಕೊಂಡಿದ್ದೇನೆ. ಪ್ರಿಯಾಂಕಾ ಗಾಂಧಿ ಕೂಡ ಕೊರೊನಾ ಲಸಿಕೆ ಪಡೆದಿರಬಹುದು. ಸೈಡ್ ಇಫೆಕ್ಟ್ ಆಗಿದ್ದರೆ ಮಾಧ್ಯಮದವರು ವರದಿ ಮಾಡುತ್ತಿರಲಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!