Ad imageAd image

ಅಮೃತ ಸರೋವರ ದಡದ ಮೇಲೆ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ

Bharath Vaibhav
ಅಮೃತ ಸರೋವರ ದಡದ ಮೇಲೆ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ
WhatsApp Group Join Now
Telegram Group Join Now

ಇಲಕಲ್:-  ಬಾಗಲಕೋಟೆ ಜಿಲ್ಲೆಯ ಇಲಕಲ್ ತಾಲೂಕಿನ ಕೆಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಕೆಲೂರು ಅಮೃತ ಸರೋವರ ಕೆರೆ ದಡದ ಮೇಲೆ ಸಸಿ ನೆಡುವ ಮೂಲಕ ವಿಶ್ವಪರಿಸರ ದಿನಾಚರಣೆ ಆಚರಿಸಲಾಯಿತು.

ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿಗಳು ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಅಮೃತ ಸರೋವರ ದಡದಲ್ಲಿ ವಿವಿಧ ಜಾತಿಯ 55 ಕ್ಕೂ ಹೆಚ್ಚು ಸಸಿಗಳನ್ನು ನೆಡಲಾಯಿತು. ಗ್ರಾಮ ಪಂಚಾಯತಿ ಅಧ್ಯಕ್ಷರು – ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ ಸಸಿ ನೆಟ್ಟು ನೀರುಣಿಸಿದರು.

ಈ ಸಂದರ್ಭದಲ್ಲಿ ತಾಂತ್ರಿಕ ಸಂಯೋಜಕರು, ಐಇಸಿ ಸಂಯೋಜಕರು, ಗ್ರಾಮ ಪಂಚಾಯಿತಿ ಅಧ್ಯಕ್ಷರು, PDO ಕಾರ್ಯದರ್ಶಿಗಳು, ಶಾಲಾ ಶಿಕ್ಷಕರು, ತಾಂತ್ರಿಕ ಸಹಾಯಕರು, ಡಾಟಾ ಎಂಟ್ರಿ ಆಪರೇಟರ್ BFT, GKM,ರವರು, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ವರದಿ ದಾವಲ್ ಶೇಡಂ

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!