Ad imageAd image

‘ಒಂದು ದೇಶ ಒಂದು ಚುನಾವಣೆ’ ವರದಿಗೆ ಕೇಂದ್ರ ಸರ್ಕಾರ ಅನುಮೋದನೆ

Bharath Vaibhav
‘ಒಂದು ದೇಶ ಒಂದು ಚುನಾವಣೆ’ ವರದಿಗೆ ಕೇಂದ್ರ ಸರ್ಕಾರ ಅನುಮೋದನೆ
MODI
WhatsApp Group Join Now
Telegram Group Join Now

ನವದೆಹಲಿ : ‘ಒಂದು ದೇಶ ಒಂದು ಚುನಾವಣೆ’ ವರದಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ದೆಹಲಿಯಲ್ಲಿ ನಡೆದ ಪ್ರಧಾನಿ ಮೋದಿ ನೇತೃತ್ವದ ಸಂಪುಟ ಸಭೆ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಒಂದು ದೇಶ ಒಂದು ಚುನಾವಣೆ’ ವರದಿಗೆ ಅನುಮೋದನೆ ನೀಡಿದೆ.

ಏಕಕಾಲದಲ್ಲಿ ಚುನಾವಣೆ ನಡೆಸುವ ಕುರಿತು ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯು ತನ್ನ ಸಮಗ್ರ ವರದಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಲಾಗಿತ್ತು.

8,626 ಪುಟಗಳ ಈ ವರದಿಯನ್ನು ಸಲ್ಲಿಕೆ ಮಾಡಲಾಗಿದ್ದು, ಸಮಿತಿಯು ಸುಮಾರು ಏಳು ತಿಂಗಳ ಕಠಿಣ ಸಮಾಲೋಚನೆ ಮತ್ತು ಸಂಶೋಧನೆ ನಡೆಸಿದೆ.

ಭಾರತದ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಅಧ್ಯಕ್ಷತೆಯಲ್ಲಿ ಈ ಸಮಿತಿಯನ್ನು ರಚಿಸಲಾಗಿದೆ . ಈ ಸಮಿತಿಯ ಇತರ ಸದಸ್ಯರು:

• ಅಮಿತ್ ಶಾ , ಕೇಂದ್ರ ಗೃಹ ಸಚಿವ

• ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ

• ಮಾಜಿ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್

• 15ನೇ ಹಣಕಾಸು ಆಯೋಗದ ಅಧ್ಯಕ್ಷ ಎನ್ಕೆ ಸಿಂಗ್

• ಲೋಕಸಭೆಯ ಮಾಜಿ ಪ್ರಧಾನ ಕಾರ್ಯದರ್ಶಿ ಡಾ ಸುಭಾಷ್ ಸಿ ಕಶ್ಯಪ್

• ಹಿರಿಯ ವಕೀಲ ಹರೀಶ್ ಸಾಳ್ವೆ

• ಮಾಜಿ ಮುಖ್ಯ ವಿಜಿಲೆನ್ಸ್ ಕಮಿಷನರ್ ಸಂಜಯ್ ಕೊಠಾರಿ

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!