ಬೆಂಗಳೂರು: ರಾಜ್ಯ ಸರ್ಕಾರದಿಂದ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಕೃಷಿ ಇಲಾಖೆಯಲ್ಲಿ ಖಾಲಿ ಇರುವಂತ 961 ಹುದ್ದೆಗಳ ಭರ್ತಿಗೆ ಮುಂದಾಗಿದೆ. ಇದಕ್ಕಾಗಿ ಕೆಪಿಎಸ್ಸಿಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಶೀಘ್ರವೇ ಅಧಿಸೂಚನೆ ಹೊರ ಬೀಳಲಿದೆ.
ಕೃಷಿ ಸಚಿವ ಚಲುವರಾಯಸ್ವಾಮಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ಕೃಷಿ ಇಲಾಖೆಯಲ್ಲಿ ಆಡಳಿತ ಸುಧಾರಣೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ.ಮುಂದುವರೆದು ಕೃಷಿ ಇಲಾಖೆಯಲ್ಲಿ ಖಾಲಿ ಇರುವಂತ ವಿವಿಧ ಹುದ್ದೆಗಳ ಭರ್ತಿಗೂ ಕ್ರಮ ವಹಿಸಲಾಗುತ್ತಿದೆ ಎಂದರು.
ಮೊದಲ ಹಂತದಲ್ಲಿ ಕೃಷಿ ಇಲಾಖೆಯಲ್ಲಿ ಖಾಲಿ ಇರುವಂತ 961 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಈಗಾಗಲೇ ಇದಕ್ಕೆ ಆರ್ಥಿಕ ಇಲಾಖೆಯಿಂದ ಅನುಮೋದನೆ ಕೂಡ ದೊರೆತಿದೆ. ಹೀಗಾಗಿ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಭರ್ತಿಗಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದರು.
ಹುದ್ದೆಗಳ ವಿವರ
ಕಲ್ಯಾಣ ಕರ್ನಾಟಕ ಭಾಗದಲ್ಲಿ ಕೃಷಿ ಅಧಿಕಾರಿ 34 ಹುದ್ದೆಗಳು
ಸಹಾಯಕ ಕೃಷಿ ಅಧಿಕಾರಿ 223 ಹುದ್ದೆಗಳು
ದ್ವಿತೀಯ ದರ್ಜೆ ಸಹಾಯಕರು 17 ಹುದ್ದೆಗಳು
ಬೆರಳಚ್ಚುಗಾರರು 17 ಹುದ್ದೆಗಳು
ಉಳಿಕೆ ವೃಂದದಲ್ಲಿ ಕೃಷಿ ಅಧಿಕಾರಿ 84 ಹುದ್ದೆಗಳು
ಸಹಾಯಕ ಕೃಷಿ ಅಧಿಕಾರಿಗಳು 586 ಹುದ್ದೆಗಳು