ಮೈಸೂರು : ವಿಶ್ವವಿಖ್ಯಾತ ದಸರಾ ಆಚರಣೆಗೆ ಇನ್ನೇನು ಕೆಲ ದಿನಗಳಷ್ಟೇ ಬಾಕಿ ಇದ್ದು, ಸಕಲ ಸಿದ್ಧತೆಗಳು ನಡೆಯುತ್ತಿದೆ. ದಸರಾ ಎಂದಾಕ್ಷಣ ಚರ್ಚೆಗೆ ಬರುವ ಮಹಿಷ ದಸರಾ ಬಗ್ಗೆ ಈ ಬಾರಿಯೂ ವಿವಾದ ಸೃಷ್ಟಿಸಿದ್ದು, ಚರ್ಚೆಗೆ ಗ್ರಾಸವಾಗಿದೆ
ಮೈಸೂರಿನಲ್ಲಿ ಸೆಪ್ಟೆಂಬರ್ 29 ರಂದು ಮಹಿಷ ದಸರಾ ಮಾಡುತ್ತೇವೆ ಅಂತ ಮಹಿಷ ದಸರಾ ಆಚರಣಾ ಸಮಿತಿ ಹೇಳಿದ್ದು, ಚಾಮುಂಡಿ ಬೆಟ್ಟದಲ್ಲಿನ ಮಹಿಷ ಮೂರ್ತಿಗೆ ಪುಷ್ಪಾರ್ಚನೆ ಮಾಡಿ ಮಹಿಷ ದಸರಾ ಮಾಡುತ್ತೇವೆ.ಅಲ್ಲದೇ ಈ ಬಾರಿಯಿಂದ ಮಹಿಷ ದಸರಾ ಬದಲು `ಮಹಿಷ ಮಂಡಲೋತ್ಸವ’ ಎಂದು ಹೊಸ ಹೆಸರು ಇಟ್ಟಿದ್ದೇವೆ ಎಂದಿದೆ
ಇನ್ನು ಮಹಿಷ ದಸರಾಗೆ ವಿರೋಧ ವ್ಯಕ್ತಪಡಿಸುತ್ತಾ ಬಂದಿರುವ ಮಾಜಿ ಸಂಸದ ಪ್ರತಾಪ್ ಸಿಂಹ ಯಾವುದೇ ಕಾರಣಕ್ಕೂ ಚಾಮುಂಡಿ ಬೆಟ್ಟದಲ್ಲಿ ಮಹಿಷಾ ದಸರಾ ಆಚರಸಲು ಬಿಡುವುದಿಲ್ಲ ಎಂದು ಗುಡುಗಿದ್ದಾರೆ.
ಹಾಗೇನಾದರೂ ಮಹಿಷ ಸದರಾ ಆಚರಿಸಲು ಹೊರಟರೆ ನಾವು ಚಾಮುಂಡಿ ಚಲೋ ಕಾರ್ಯಕ್ರಮ ಮಾಡ್ತೀವಿ ಎಂದಿದ್ದು, ನಾವಾ ಅವರ ನೋಡೇಬಿಡೋಣಾ ಅಂತ ಸವಾಲು ಹಾಕಿದ್ದಾರೆ. ಕಳೆದ ಕೆಲ ವರ್ಷಗಳಿಂದ ಭಾರೀ ಚರ್ಚೆಗೆ ಗ್ರಾಸವಾಗಿರುವ ಮಹಿಷ ದಸರಾ ಈ ಬಾರಿ ವಿವಾದಕ್ಕೆ ಕಾರಣವಾಗಿದೆ