ಬೆಂಗಳೂರು : “ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ ಪ್ರಾರ್ಥನೆ ಮಾಡಿಕೊಳ್ಳುತ್ತಾರೆ. ಇದು ಹಿಂದೂಗಳ ಆಸ್ತಿಯಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಬೇಡ ಎಂಬ ಬಿಜೆಪಿ ನಾಯಕರ ವಿರೋಧದ ಬಗ್ಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದರು.
“ನಾವುಗಳು ಮಸೀದಿ, ದರ್ಗಾಗಳಿಗೆ, ಜೈನರ ಬಸದಿಗಳಿಗೆ, ಚರ್ಚ್, ಗುರುದ್ವಾರಗಳಿಗೆ ಹೋಗುತ್ತೇವೆ. ನಾವು ಗುರುದ್ವಾರಕ್ಕೆ ಹೋಗೋದನ್ನ ಯಾರಾದರೂ ತಪ್ಪಿಸಿದ್ದಾರಾ? ಹಿಂದೂ ದೇವಸ್ಥಾನಗಳಿಗೆ ಅವರುಗಳು ಬರುವುದನ್ನು ನಾವು ವಿರೋಧಿಸಿದ್ದೇವೆಯೇ? ಯಾವುದೇ ಶ್ರದ್ದಾ ಕೇಂದ್ರಗಳಿಗೆ ಯಾರು ಬೇಕಾದರೂ ಹೋಗಿ ಬರಬಹುದು” ಎಂದರು.




