Ad imageAd image

ಗ್ರಾಮ ಪಂಚಾಯಿತಿಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಚನ್ನರಾಜ ಹಟ್ಟಿಹೊಳಿ

Bharath Vaibhav
ಗ್ರಾಮ ಪಂಚಾಯಿತಿಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಚನ್ನರಾಜ ಹಟ್ಟಿಹೊಳಿ
WhatsApp Group Join Now
Telegram Group Join Now

ಬೆಳಗಾವಿ: ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸೋಮವಾರ ಬೆಳಗಾವಿ ತಾಲೂಕಿನ ಹಿಂಡಲಗಾ ಮತ್ತು ಬೆನಕನಹಳ್ಳಿ ಗ್ರಾಮ ಪಂಚಾಯತಿಗಳ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಗ್ರಾಮದಲ್ಲಿ ಆಗಿರುವ, ಆಗುತ್ತಿರುವ ಅಭಿವೃದ್ಧಿ ಕೆಲಸಗಳ ಕುರಿತು ಮಾಹಿತಿ ಪಡೆದ ಅವರು, ಗ್ರಾಮದ ಬೇಡಿಕೆಗಳ ಕುರಿತು ಸದಸ್ಯರೊಂದಿಗೆ ಚರ್ಚಿಸಿದರು. ಎಲ್ಲ ಸದಸ್ಯರೂ ಪಕ್ಷ ಭೇದ ಮರೆತು ಅಭಿವೃದ್ಧಿಗೆ ಕೈ ಜೋಡಿಸಬೇಕು. ಸರಕಾರ ನೀಡುವ ಅನುದಾನದ ಸಮರ್ಪಕ ಬಳಕೆಗೆ ಕ್ರಮಕೈಗೊಳ್ಳಬೇಕು. ಕಾಮಗಾರಿಗಳ ಗುಣಮಟ್ಟ ಪರಿಶೀಲಿಸುತ್ತಿರಬೇಕು. ಜನರ ಸಮಸ್ಯೆಗೆ ಅಧಿಕಾರಿಗಳು ಸೂಕ್ತವಾಗಿ ಸ್ಪಂದಿಸಬೇಕು ಎಂದು ಚನ್ನರಾಜ ಹಟ್ಟಿಹೊಳಿ ತಿಳಿಸಿದರು.

ಈ ಸಮಯದಲ್ಲಿ ತಹಸಿಲ್ದಾರ, ತಾಲೂಕು ಪಂಚಾಯಿತ ಕಾರ್ಯನಿರ್ವಾಹಕ ಅಧಿಕಾರಿ, ತಾಲುಕು ಆರೋಗ್ಯಾಧಿಕಾರಿ, ಪಂಚಾಯತ್ ಅಧ್ಯಕ್ಷ – ಉಪಾಧ್ಯಕ್ಷರು ಹಾಗೂ ಸರ್ವಸದಸ್ಯರು, ಗ್ರಾಮ ಲೆಕ್ಕಾಧಿಕಾರಿ, ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

 

ವರದಿ:- ಪ್ರತೀಕ ಚಿಟಗಿ

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!