ಸೇಡಂ:- ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಸೇಡಂ ಯೋಜನಾ ಕಚೇರಿ ವ್ಯಾಪ್ತಿಯ ಮುಧೋಳ ವಲಯದ ಮದನಾ ಕಾರ್ಯಕ್ಷೇತ್ರದಲ್ಲಿ ದಿನಾಂಕ ೨೬/೧೦/೨೦೨೪ರಂದು ದೇವಸ್ಥಾನದ ಜೀರ್ಣೋದ್ಧಾರದ ಒಂದು ಲಕ್ಷ ಮೊತ್ತದ ಡಿಡಿ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಸೇಡಂ ತಾಲೂಕು ಕುರುಬ ಸಮಾಜದ ಅಧ್ಯಕ್ಷರಾದ ಸತೀಶ್ ಪೂಜಾರಿ ರವರು ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯು ಸಮುದಾಯ ಅಭಿವೃದ್ಧಿ ಯೋಜನೆಯಲ್ಲಿ ಅನೇಕ ವರ್ಷಗಳಿಂದ ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಕೂಡ ತನ್ನದೇ ಆದ ಕೊಡುಗೆ ನೀಡುತ್ತಾ ಬರುತ್ತಿದೆ. ಈ ನಿಟ್ಟಿನಲ್ಲಿ ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ₹100000/- ಮೊತ್ತವನ್ನು ಪೂಜ್ಯರ ಆಶಿರ್ವಾದದ ರೂಪದಲ್ಲಿ ನೀಡಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸೇಡಂ ತಾಲೂಕಿನ ಮಾನ್ಯ ಯೋಜನಾಧಿಕಾರಿಗಳು ಮಂಜುನಾಥ್ ಎಸ್.ಜಿ ರವರು ಶ್ರೀ ಕ್ಷೇತ್ರ ಧರ್ಮಸ್ಥಳದ ಹಿನ್ನೆಲೆ ಮತ್ತು ಯೋಜನೆಯ ನಡೆದು ಬಂದ ದಾರಿಯ ಬಗ್ಗೆ, ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ಕಮಿಟಿಯ ಅಧ್ಯಕ್ಷರು ಲಾಲಪ್ಪ ಪೂಜಾರಿ, ಸೋಶಿಯಲ್ ಮೀಡಿಯಾ ಅಧ್ಯಕ್ಷರಾದ ಮೈಬೂಬ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು ನಾಗೇಶ್ ಕಾಳ , ಮಾಜಿ ತಾಲೂಕು ಪಂಚಾಯತಿ ಸದಸ್ಯರು ಹಣಮಂತ್ ಬೋಯಿನಿ, ಖಂಡೆಪ್ಪ ಖಂಡೇಬೋಯಿನಿ, ಮಲ್ಲಪ್ಪ ಪೂಜಾರಿ, ಕೃಷಿ ಮೇಲ್ವಿಚಾರಕರು ರಾಹುಲ, ಸೇವಾಪ್ರತಿನಿಧಿ ದೇವೇಂದ್ರ, ಗ್ರಾಮೀಣ ಸೇವಾದಾರರು ಶಿರಿಷಾ, ಸಂಘದ ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ:- ವೆಂಕಟಪ್ಪ ಕೆ ಸುಗ್ಗಾಲ್.




