ಚೇಳೂರು: ತಾಲ್ಲೂಕಿನಲ್ಲಿ ನವೆಂಬರ್ 26, 2025 ರಂದು ಆಯೋಜಿಸಲಾಗಿರುವ ಸಂವಿಧಾನ ದಿನಾಚರಣೆ ಕಾರ್ಯಕ್ರಮಕ್ಕೆ ತಾಲ್ಲೂಕಿನ ಎಲ್ಲ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಮುಖಂಡರು ಸಕಾಲದಲ್ಲಿ ಹಾಜರಾಗಬೇಕೆಂದು ತಹಸೀಲ್ದಾರ್ ಶ್ವೇತಾ ಬಿ.ಕೆ. ಅವರು ಕೋರಿದ್ದಾರೆ.
ಈ ಕುರಿತು ಅವರು ಮಂಗಳವಾರ ತಹಸೀಲ್ದಾರ್ ಕಚೇರಿಯಲ್ಲಿ ಪತ್ರಿಕಾ ಹೇಳಿಕೆಯನ್ನು ನೀಡಿ ಮಾತನಾಡಿದ ಅವರು ಸಂವಿಧಾನ ದಿನದ ಕಾರ್ಯಕ್ರಮವು ಬೆಳಗ್ಗೆ 10:00 ಗಂಟೆಗೆ ಪಟ್ಟಣದ ಕೆ.ಪಿ.ಎಸ್. ಶಾಲಾ ಆವರಣದಲ್ಲಿ ನಡೆಯಲಿದೆ ಎಂದು ತಿಳಿಸಿದರು.
ಈ ಮಹತ್ವದ ಕಾರ್ಯಕ್ರಮಕ್ಕೆ ತಾಲ್ಲೂಕಿನಾದ್ಯಂತ ಪ್ರತಿಯೊಂದು ಸಂಘಟನೆಯ ಪದಾಧಿಕಾರಿಗಳು ಹಾಗೂ ಮುಖಂಡರು, ಅದರಲ್ಲೂ ವಿಶೇಷವಾಗಿ ದಲಿತಪರ ಸಂಘಟನೆಯ ಮುಖಂಡರು ಹಾಗೂ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ನಮ್ಮ ಸಂವಿಧಾನದ ಆಶಯಗಳನ್ನು ಬಲಪಡಿಸಬೇಕು ಎಂದು ತಹಸೀಲ್ದಾರ್ ಶ್ವೇತಾ ಬಿ.ಕೆ. ಅವರು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡರು.




