ಬೆಳಗಾವಿಯಲ್ಲಿ 1924 ರಲ್ಲಿ ಜರುಗಿದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಸವಿನೆನಪಿಗಾಗಿ ಸುವರ್ಣ ವಿಧಾನಸೌಧದಲ್ಲಿ ಮಂಗಳವಾರ ನಡೆಯಲಿರುವ ಮಹಾತ್ಮಾ ಗಾಂಧೀಜಿ ಪ್ರತಿಮೆ ಅನಾವರಣ ಸಮಾರಂಭದ ಸಿದ್ಧತೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೋಮವಾರ ಸಂಜೆ ಪರಿಶೀಲಿಸಿದರು.
ವಿಧಾನಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ್, ಸಚಿವರಾದ ಎಚ್.ಕೆ.ಪಾಟೀಲ, ಎಂ.ಬಿ.ಪಾಟೀಲ, ಜಿ.ಪರಮೇಶ್ವರ, ಜಮೀರ್ ಅಹ್ಮದ್, ಕೆ.ಜೆ.ಜಾರ್ಜ್ ಮತ್ತಿತರರು ಉಪಸ್ಥಿತರಿದ್ದರು.





