ಚಾಮರಾಜನಗರ : ಮಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಬುಧುವಾರ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲಕ್ಕೆ ಭೇಟಿ ನೀಡಿ ಮಾಜಿ ಶಾಸಕರು ಹಾಗೂ ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರಾದ ಎಸ್.ಜಯಣ್ಣ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದರು.
ರೇಷ್ಮೆ,ಪಶುಸಂಗೋಪನೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ವೆಂಕಟೇಶ್,ಸಮಾಜ ಕಲ್ಯಾಣ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ,ಲೋಕಸಭಾ ಸದಸ್ಯರಾದ ಸುನೀಲ್ ಬೋಸ್,ಶಾಸಕರಾದ ಯತೀಂದ್ರ ಸಿದ್ದರಾಮಯ್ಯ, ಸಿ.ಪುಟ್ಟರಂಗಶೆಟ್ಟಿ,ಎ.ಆರ್.ಕೃಷ್ಣಮೂರ್ತಿ,ಎಚ್.ಎಂ.ಗಣೇಶ್ ಪ್ರಸಾದ್,ಡಾ.ಡಿ.ತಿಮಯ್ಯ, ಗ್ಯಾರಂಟಿ ಯೋಜನೆಗಳ ಉಪಾಧ್ಯಕ್ಷರಾದ ಡಾ.ಪುಷ್ಪ ಅಮರ್ ನಾಥ್ ಇನ್ನಿತರ ಗಣ್ಯರು ಸಹ ಎಸ್.ಜಯಣ್ಣ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದರು.
ವರದಿ :ಸ್ವಾಮಿ ಬಳೇಪೇಟೆ