ಕರ್ನಾಟಕಕ್ಕೂ ಕಾಲಿಟ್ಟ ಚೀನಾ ವೈರಸ್: ಬೆಂಗಳೂರಿನಲ್ಲಿ 8 ತಿಂಗಳ ಮಗುವಿನಲ್ಲಿ ‘HMPV’ ಸೋಂಕು ದೃಢ
ಬೆಂಗಳೂರು: ಚೀನಾದಲ್ಲಿ ಅಟ್ಟಹಾಸ ಮೆರೆಯುತ್ತಿರುವ HMPV ವೈರಸ್ ಇದೀಗ ಭಾರತಕ್ಕೂ ಕಾಲಿಟ್ಟಿದೆ. ಕರ್ನಾಟಕದಲ್ಲಿ ಮೊದಲ ಕೇಸ್ ಪತ್ತೆಯಾಗಿದ್ದು, ಕೊರೋನಾ ವೈರಸ್ ಗಿಂತಲೂ ವಿಭಿನ್ನವಾಗಿರುವ HMPV ವೈರಸ್ ಬೆಂಗಳೂರಿನಲ್ಲಿ 8 ತಿಂಗಳ ಮಗುವಿನಲ್ಲಿ ಈ ವೈರಸ್ ಪತ್ತೆಯಾಗಿದೆ ಎಂದು ವರದಿಯಾಗಿದೆ.
ಹೌದು, ಬೆಂಗಳೂರಿನ 8 ತಿಂಗಳ ಮಗುವಿಗೆ HMPV ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಆದರೆ, ಆರೋಗ್ಯ ಇಲಾಖೆ ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ. ಈ ವೈರಸ್ ಭಾರತದಲ್ಲಿ ಸಾಮಾನ್ಯವಾಗಿದ್ದು, ಚೀನಾದಲ್ಲಿ ಪತ್ತೆಯಾಗಿರುವ ಮ್ಯುಟೇಟೆಡ್ ವೈರಸ್‌ನೊಂದಿಗೆ ಇದಕ್ಕೆ ಸಂಬಂಧ ಇದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
ಬೆಂಗಳೂರಿನಲ್ಲಿ 8 ತಿಂಗಳ ಮಗುವಿನಲ್ಲಿ ಎಚ್‌ಎಂಪಿವಿ ವೈರಸ್ ದೃಢಪಟ್ಟಿದೆ. ಮಗುವಿಗೆ ಜ್ವರ ಬಂದ ಕಾರಣ ನಗರದ ಖಾಸಗಿ ಆಸ್ಪತ್ರೆಯಲ್ಲಿ ಅಡ್ಮಿಟ್ ಮಾಡಲಾಗಿತ್ತು. ರಕ್ತ ಪರೀಕ್ಷೆ ಮಾಡಿಸಿದಾಗ HMPV ವೈರಸ್ ಇರುವುದು ಪತ್ತೆಯಾಗಿದೆ. ಆದರೆ, ಈ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತ ಅವರು ಮಾಹಿತಿ ನೀಡಿದ್ದಾರೆ.