Ad imageAd image

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳು ನಡೆಯಲು ಅನುಮತಿ

Bharath Vaibhav
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳು ನಡೆಯಲು ಅನುಮತಿ
WhatsApp Group Join Now
Telegram Group Join Now

ಬೆಂಗಳೂರು : ಕಳೆದ ವರ್ಷ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ದುರಂತದ ನಂತರ ಐಪಿಎಲ್ ಪಂದ್ಯಗಳಿಗೆ ಅನುಮತಿ ಇಲ್ಲದೇ ಆರ್‌ಸಿಬಿ ಅಭಿಮಾನಿಗಳು ಚಿಂತೆಯಲ್ಲಿದ್ದರು.

ಆದರೆ ಇದೀಗ ದೊಡ್ಡ ಗುಡ್​ ನ್ಯೂಸ್​​ ಸಿಕ್ಕಿದೆ. ರಾಜ್ಯ ಸರ್ಕಾರವು ಕಟ್ಟುನಿಟ್ಟಾದ ಷರತ್ತುಗಳೊಂದಿಗೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ 2026 ಪಂದ್ಯಗಳ ಆಯೋಜನೆಗೆ ಅಧಿಕೃತ ಅನುಮತಿ ನೀಡಿದೆ.

ಇದರೊಂದಿಗೆ ಒಟ್ಟು 7 ಪಂದ್ಯಗಳಿಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಆರ್‌ಸಿಬಿ ಅಭಿಮಾನಿಗಳಿಗೆ ಇದು ಡಬಲ್ ಸಂತೋಷದ ಸುದ್ದಿಯಾಗಿದೆ.

ಗೃಹ ಸಚಿವರ ಉನ್ನತ ಮಟ್ಟದ ಸಭೆಯ ನಿರ್ಣಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಇಂದು ಉನ್ನತ ಮಟ್ಟದ ಸಭೆ ಕರೆದು ಈ ನಿರ್ಣಯ ತೆಗೆದುಕೊಂಡರು.

ಸಭೆಯಲ್ಲಿ ಡಿಜಿಪಿ ಡಾ. ಎಂ.ಎ. ಸಲೀಂ, ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ಎಸಿಎಸ್ ತುಷಾರ್ ಗಿರಿನಾಥ್, ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ತಜ್ಞರ ಸಮಿತಿ (ಜಸ್ಟಿಸ್ ಕುನ್ಹಾ ಸಮಿತಿ ಶಿಫಾರಸುಗಳ ಆಧಾರದಲ್ಲಿ) ಶುಕ್ರವಾರ ಚಿನ್ನಸ್ವಾಮಿ ಸ್ಟೇಡಿಯಂಗೆ ಭೇಟಿ ನೀಡಿ ವರದಿ ಸಲ್ಲಿಸಿತ್ತು. ಈ ವರದಿಯ ಆಧಾರದ ಮೇಲೆ ಇಂದು ಅಂತಿಮ ನಿರ್ಣಯ ತೆಗೆದುಕೊಳ್ಳಲಾಯಿತು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!