Join The Telegram | Join The WhatsApp |
ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಪದವಿ ಕಾಲೇಜುಗಳಲ್ಲಿ ಭಾರತದ ಸಂವಿಧಾನ ಪೀಠಿಕೆಯನ್ನು ಫಲಕದಲ್ಲಿ ಅವಳಡಿಸಬೇಕೆಂದು ಕಾಲೇಜು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ರಾಜ್ಯದ ಎಲ್ಲಾ ಪದವಿ ಕಾಲೇಜುಗಳಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಹೇಳಿರುವಂತಹ ಸಂವಿಧಾನ ಪೀಠಿಕೆ ಅದರ ಆತ್ಮವಾಗಿದೆ.
ಹೀಗಾಗಿ ಎಲ್ಲ ಕಾಲೇಜುಗಳ ಪ್ರಾಂಶುಪಾಲರು ಕಾನೂನು ಇಲಾಖೆಯ ಕೇಂದ್ರದಿಂದ ಸಂವಿಧಾನ ಪೀಠಿಕೆಯನ್ನು ಖರೀದಿಸಿ ಕಾಲೇಜಿನಲ್ಲಿ ಫಲಕ ಪ್ರಕಟಿಸಬೇಕು ಎಂದು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ಸಂವಿಧಾನ ಅಮೃತ ಮಹೋತ್ಸವದ ಅಂಗವಾಗಿ ಸಂವಿಧಾನ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ರಾಜ್ಯ ಎಲ್ಲ ಸರ್ಕಾರಿ ಹಾಗೂ ಖಾಸಗಿ ಪದವಿ ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಅಳವಡಿಸಬೇಕೆಂದು ಸೂಚನೆ ನೀಡಲಾಗಿದೆ.
Join The Telegram | Join The WhatsApp |