ಕಲಬುರಗಿ:- ಜಿಲ್ಲೆಯ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಿಕೊಳ್ಳಲು ಕೂಡ ಪೊಲೀಸ್ ಅಧಿಕಾರಿಗಳು ತಯಾರಿಲ್ಲ ಎಂದು ಬಿಜೆಪಿ ನಾಯಕರು ಪೊಲೀಸರ ಜೊತೆ ವಾಗ್ವಾದ ನಡೆಸಿದರು.
ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಕುಳಿತರು ಡೊಂಟ್ ಕೆರ್ ಎಂಬಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಸೇಡಂ ಮಾಜಿ ಶಾಸಕ ಹಾಗೂ ಕಲಬುರಗಿ ಬಿಜೆಪಿ ಮುಖಂಡರಾದ ರಾಜಕುಮಾರ್ ಪಾಟೀಲ್ ತೆಲ್ಕೂರ್ ಅವರು ಸೇರಿದಂತೆ ಇನ್ನಿತರ ಬಿಜೆಪಿ ನಾಯಕರು ಪೊಲೀಸರ ವಿರುದ್ಧ ರೊಚ್ಚಿಗೆದ್ದರು.
ಈ ಕುರಿತು ವಿಡಿಯೋ ಒಂದು ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ವರದಿ ವೆಂಕಟಪ್ಪ ಕೆ ಸುಗ್ಗಾಲ್