ಸಿಂದಗಿ: ಇಂದು ಬೆಳ್ಳಂಬೆಳಿಗ್ಗೆ ಅಕ್ರಮ ಅಂಗಡಿಗಳ ತೆರವು ಕಾರ್ಯಾಚರಣೆ ಸಿಂದಗಿಯಲ್ಲಿ ನಡೆಸಲಾಯಿತು.
ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಬಸ್ ನಿಲ್ದಾಣದ ಮುಂಭಾಗದಲ್ಲಿ ಇಂದು ಬುಲ್ಡೋಜರ್ ಘರ್ಜನೆ ಕೇಳಿ ಬಂದಿದ್ದು, ಸಿಂದಗಿ ನಗರಸಭೆಯ ಕಾರ್ಯಾಚರಣೆ ಅಕ್ರಮ ವ್ಯಾಪಾರಿಗಳಿಗೆ ಬಿಸಿ ಮುಟ್ಟಿಸಿದೆ, ನಿನ್ನೆ ಸೋಮವಾರ ಆಕಸ್ಮಿಕವಾಗಿ ಸಿಂದಗಿ ಪಟ್ಟಣದ ಪುರಸಭೆ, ಹಾಗೂ ತಹಸಿಲ್ದಾರ್ ಕಾರ್ಯಾಲಯ ಗಳಿಗೆ ಭೇಟಿ ನೀಡಿದ ವಿಜಯಪುರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಅಂಬೇಡ್ಕರ್ ವೃತ್ತದಿಂದ ಟಿಪ್ಪು ಸುಲ್ತಾನ್ ವೃತ್ತದ ರವರಿಗೆ ಅತ್ಯುಕ್ರಮಣವಾಗಿ ಸಾರ್ವಜನಿಕರಿಗೆ ತೊಂದರೆ ಆಗುವ ನಿಟ್ಟಿನಲ್ಲಿ ಮೊಳಿಗಿಗಳು ಇಟ್ಟು ವ್ಯಾಪಾರ ಮಾಡುವುದನ್ನು ಕಂಡ ಅವರು ಪುರಸಭೆ ಮುಖ್ಯ ಅಧಿಕಾರಿಗೆ ತರಾಟೆಗೆ ತೆಗೆದುಕೊಂಡು ಆದಷ್ಟು ಬೇಗ ಅತಿಕ್ರಮಣ ತೆರವುಗೊಳಿಸಬೇಕು ಎಂದು ಹೇಳಿದರು, ಜಿಲ್ಲಾಧಿಕಾರಿಗಳ ಮಾರ್ಗದರ್ಶನದಂತೆ ಇಂದು ಬೆಳಿಗ್ಗೆ ಸಿಂದಗಿ ಪಟ್ಟಣದ ಹೃದಯ ಭಾಗವಾಗಿರುವ ಬಸ್ ನಿಲ್ದಾಣದ ಮುಂಭಾಗದಿಂದ ಅಂಬೇಡ್ಕರ್ ವೃತ್ತದ ವರೆಗೆ ಅತಿಕ್ರಮಣ ತೆರವುಗೊಳಿಸಲಾಯಿತು, ಈ ತರುವ ಕಾರ್ಯ ಚರಣದಲ್ಲಿ ಪುರಸಭೆ ಮುಖ್ಯ ಅಧಿಕಾರಿ ಹಾಗೂ ಸಿಂದಗಿ ಪೊಲೀಸ್ ಠಾಣೆ ಪಿಎಸ್ಐ ಆರೀಫ್ ಮೂಶಾಪುರಿ ಹಾಗೂ ಪೊಲೀಸ್ ಸಿಬ್ಬಂದಿ ಪುರಸಭೆ ಸಿಬ್ಬಂದಿ ಭಾಗಿಯಾಗಿದ್ದರು.
ಅಬ್ದುಲ್ ಮುಜಾವರ್