Join The Telegram | Join The WhatsApp |
ಬೆಳಗಾವಿ: ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ ಹೆಗಡೆ ಸರ್ಕಾರಕ್ಕೆಈಗಷ್ಟೇ ಮಧ್ಯಂತರ ವರದಿ ಸಲ್ಲಿಸಿದ್ದಾರೆ. ಕೂಡಲೇ ಈ ಬಗ್ಗೆ ಕಾನೂನು ಸಂಸದರೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಸುವರ್ಣಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೀಸಲಾತಿ ಕುರಿತು ಸದಾಶಿವ ಆಯೋಗ ಹಾಗೂ ರಂಗರಾಜು ಆಯೋಗದ ವರದಿಗಳು ಬಂದಿವೆ. ಅವು ಇಂದಿಗೂ ಆಯೋಗದ ಮಟ್ಟದಲ್ಲೇ ಉಳಿದಿರುವುದರಿಂದ ಸರ್ಕಾರದಿಂದ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಆದರೆ, ಹೆಗಡೆ ಅವರು ಈಗಷ್ಟೇ ಮಧ್ಯಂತರ ವರದಿ ಸಲ್ಲಿಸಿದ್ದು, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು ಸೇರಿದಂತೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಸೂಕ್ತ ತೀರ್ಮಾನಕ್ಕೆ ಬರಲಾಗುವುದು ಎಂದರು.
ಇನ್ನು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೋವಿಡ್
ವೇಗವಾಗಿ ಕೋವಿಡ್ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಮುನ್ನೆಚ್ಚರಿಕೆ ವಹಿಸುವ ನಿಟ್ಟಿನಲ್ಲಿ .
ಆರೋಗ್ಯ ಸಚಿವರ ನೇತೃತ್ವದಲ್ಲಿ ತಜ್ಞರ ಜತೆ ಸಲಹಾ ಸಮಿತಿ ಸಭೆ ನಡೆಸಿ ಸೋಂಕು ಹರಡದಂತೆ ತಡೆಯಲು ಕ್ರಮವಹಿಸಲಾಗುವುದು. ಸರ್ವಾಜನಿಕರು ಯಾವುದೇ ಆತಂಕಪಡುವ ಅಗತ್ಯವಿಲ್ಲ. ತಪ್ಪದೇ ತಜ್ಞರ ಸಲಹೆ ಪಾಲಿಸಬೇಕು ಎಂದು ಸಲಹೆ ನೀಡಿದರು.
ಕೋವಿಡ್ ರೂಪಾಂತರಿ ತಳಿ ಉಲ್ಬಣ ಹಿನ್ನೆಲೆಯಲ್ಲಿ
ಅವಧಿಗೂ ಮುನ್ನ ಚುನಾವಣೆ ಮಾಡುವ ಬೆಳವಣಿಗೆ ನಡೆದಿವೆ ಎನ್ನಲಾದ ಡಿ.ಕೆ.ಶಿವಕುಮಾರ್ ಅವರ ಹೇಳಿಕೆ ನಿಜವಾಗದು. ಅಂತಹ ಯಾವುದೇ ಚರ್ಚೆ ಕೇಂದ್ರ ಸರ್ಕಾರದ ಮಟ್ಟದಲ್ಲಿ ನಡೆದಿಲ್ಲ. ಅವಧಿಗೂ ಮುನ್ನ ಚುನಾವಣೆ ನಡೆಸುವ ಅಗತ್ಯವಿಲ್ಲ ಎಂದು ಸ್ಪಷ್ಠಪಡಿಸಿದರು.
ಸಚಿವ ಸಂಪುಟಕ್ಕೆ ಸೇರುವ ಬಗ್ಗೆ ರಮೇಶ ಜಾರಕಿಹೊಳಿ ಹಾಗೂ ಕೆ.ಎಸ್.ಈಶ್ವರಪ್ಪ ಅವರು ಭೇಟಿಯಾಗಿ ಚರ್ಚಿಸಿದ್ದಾರೆ. ಸಂಪುಟ ವಿಸ್ತರಣೆ ಮಾಡುವ ಆನಿವಾರ್ಯತೆ ಇದೆ. ಈ ಬಗ್ಗೆ ಹೈಕಮಾಂಡ್ ಗಮನಕ್ಕೆ ತರಲಾಗುತ್ತಿದ್ದು, ಹೈಕಮಾಂಡ್ ಸೂಚನೆಯಂತೆ ಕ್ರಮವಹಿಸಲಾಗುವುದು ಎಂದರು.
ವರದಿ ಪ್ರಕಾಶ ಕುರಗುಂದ..
Join The Telegram | Join The WhatsApp |