Join The Telegram | Join The WhatsApp |
ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಬುಲಾವ್ ಮೇರೆಗೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೆಹಲಿ ಪ್ರವಾಸ ಕೈಗೊಂಡಿದ್ದು, ತೀವ್ರ ಕುತೂಹಲ ಕೆರಳಿಸಿದೆ.
ಇಂದು ಮಧ್ಯಾಹ್ನ 2 ಗಂಟೆಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಲಿದ್ದು, ಅಮಿತ್ ಶಾ ಹಾಗೂ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಲಿದ್ದಾರೆ.
ರಾಜ್ಯ ವಿಧಾನಸಭೆ ಚುನಾವಣೆ ಕಾರ್ಯತಂತ್ರ ಕುರಿತಂತೆ ಅಮಿತ್ ಶಾ ಹಾಗೂ ನಡ್ಡಾ ಜೊತೆಗೆ ಸಿಎಂ ಬೊಮ್ಮಾಯಿ ಅವರೊಂದಿಗೆ ಚರ್ಚೆ ನಡೆಸಲಿದ್ದಾರೆ. ಅಮಿತ್ ಶಾ ಫೆಬ್ರವರಿ 10 ಮತ್ತು 11 ರಂದು ಕರಾವಳಿ ಭಾಗದಲ್ಲಿ ಪ್ರವಾಸ ಕೈಗೊಂಡಿದ್ದು, ಈ ಬಗ್ಗೆಯೂ ಚರ್ಚೆ ನಡೆಸುವ ಸಾಧ್ಯತೆ ಇದೆ.
Join The Telegram | Join The WhatsApp |