Join The Telegram | Join The WhatsApp |
ಬೆಂಗಳೂರು: ಮಕ್ಕಳಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳಿಗೆ ಮೊದಲನೇ ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಇಂದು ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ವತಿಯಿಂದ ಆಯೋಜಿಸಿದ್ದ ವಿಜ್ಞಾನ ಮೇಳ-2023ನ್ನು ಉದ್ಘಾಟಿಸಿ ಮಾತನಾಡಿದ ಅವರು ರಾಜ್ಯದ ವಸತಿ ಶಿಕ್ಷಣ ಸಂಸ್ಥೆಗೆ ಸಾವಿರಾರು ಕೋಟಿ ಹಣವನ್ನು ಕಟ್ಟಡ ಕಾಮಗಾರಿ ಸೇರಿದಂತೆ ವಿವಿಧ ಕೆಲಸಗಳಿಗೆ ಸರ್ಕಾರ ವಿನಿಯೋಗಿಸುತ್ತಿದೆ.
ಪರಿಶಿಷ್ಟ ಸಮುದಾಯ / ಪರಿಶಿಷ್ಟ ಪಂಗಡಕ್ಕೆ ಜಮೀನು ಖರೀದಿ ಮಾಡಲು ರೂ. 20 ಲಕ್ಷ ನೀಡಲು ಯೋಜನೆ ರೂಪಿಸಲಾಗುತ್ತಿದೆ. ಮೀಸಲಾತಿಯನ್ನು ಪರಿಶಿಷ್ಟ ಸಮುದಾಯಕ್ಕೆ 15% ರಿಂದ 17%, ಪರಿಶಿಷ್ಟ ಪಂಗಡಕ್ಕೆ 3% ರಿಂದ 7% ಹೆಚ್ಚಿಸಲಾಗಿದೆ. ಸಮುದಾಯಗಳು ಮುಖ್ಯವಾಹಿನಿಗೆ ಸೇರಲು ಬಾಬು ಜಗಜೀವನ್‍ರಾಮ್ ಹೆಸರಲ್ಲಿ ಪ್ರತಿಯೊಂದು ಕ್ಷೇತ್ರದಲ್ಲಿ 100 ಯುವಕರಿಗೆ ಸ್ವಯಂ ಉದ್ಯೋಗಕ್ಕೆ ಕಾರ್ಯಕ್ರಮ ರೂಪಿಸಿದೆ.
ಸಮಾಜ ಕಲ್ಯಾಣ ಇಲಾಖೆಯು ಉದ್ಯೋಗ, ಶಿಕ್ಷಣ, ಸಬಲೀಕರಣ ಈ ಮೂರನ್ನು ಮಾಡುತ್ತಿದೆ. ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಯಶಸ್ವಿಯಾಗಿ ಕುಟುಂಬ, ಊರಿಗೆ, ಸಮಾಜಕ್ಕೆ ಹಾಗೂ ಸಮುದಾಯಕ್ಕೆ ಸಹಾಯ ಮಾಡಬೇಕು.
ಸಮಾಜ ಪರಿವರ್ತನೆಯಾಗಿ ನಾಡು ಮತ್ತು ದೇಶ ಅತ್ಯಂತ ಶಕ್ತಿಯುತವಾಗಿ ಬೆಳೆಯುತ್ತದೆ. ಸಬ್ ಕೆ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ಪ್ರಯಾಸ್ ಇದೇ ಪ್ರಧಾನ ಮಂತ್ರಿಗಳ ಧ್ಯೇಯ ಎಂದರು.
ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಮಾತನಾಡಿ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥ್ತೆಗಳ ಸಂಘದ 830 ಮತ್ತು ಅಲ್ಪಸಂಖ್ಯಾತ ಇಲಾಖಾ ವ್ಯಾಪ್ತಿಯ 326 ಶಾಲೆಗಳು ಸೇರಿದಂತೆ ಒಟ್ಟು 1156 ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.
ವಿದ್ಯಾರ್ಥಿಗಳು ವೈಜ್ಞಾನಿಕ ವಿಚಾರವನ್ನು ಹಂಚಿಕೊಳ್ಳಬೇಕೆಂಬ ಉದ್ದೇಶದಿಂದ ‘ವಿಜ್ಞಾನ ಮೇಳ’ವನ್ನು ಆಯೋಜಿಸಲಾಗಿದೆ ಎಂದು ಹೇಳಿದರು.
Join The Telegram | Join The WhatsApp |