ಮೈಸೂರು: ಪ್ರಧಾನಿ ಹುದ್ದೆಯ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಈ ಕುರಿತು ನೀಡಿರುವ ಹೇಳಿಕೆಗೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಗೆ ಸವಾಲೊಂದನ್ನು ಎಸೆದಿದ್ದಾರೆ.
ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಹೆಸರಿಗೆ ಕಾಂಗ್ರೆಸ್ ಸೂಚಿಸಲಿ ಎಂಬ ಬಿಜೆಪಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ , ವಿಜಯೇಂದ್ರ ಬಿಜೆಪಿ ಅಧ್ಯಕ್ಷಗಿರಿಯನ್ನು ಎಸ್ ಸಿ ವರ್ಗದವರಿಗೆ ಬಿಟ್ಟುಕೊಡಲಿ ಮತ್ತು ದೇಶದ ಪ್ರಧಾನಿ ಸ್ಥಾನವನ್ನು ಪರಿಶಿಷ್ಟ ಜಾತಿಗೆ ಸೇರಿದವರಿಗೆ ಮೊದಲು ಬಿಟ್ಟುಕೊಡಲಿ ಎಂದರು.
ಸಂವಿಧಾನ ಬದ್ಧವಾಗಿ ಸಾಮಾಜಿಕ ನ್ಯಾಯದ ಪರವಾಗಿರುವುದು ಕಾಂಗ್ರೆಸ್ ಹೊರತು ಬಿಜೆಪಿ ಪಕ್ಷವಲ್ಲ ಎಂದು ವಾಗ್ದಾಳಿ ನಡೆಸಿ ದರು.




