Ad imageAd image

ಸರ್ಕಾರಿ ನೌಕರರು, ಆದಾಯ ತೆರಿಗೆ ಪಾವತಿದಾರರ ಬಿಪಿಎಲ್ ಕಾರ್ಡ್ ರದ್ದು : ಸಿಎಂ ಸ್ಪಷ್ಟನೆ 

Bharath Vaibhav
ಸರ್ಕಾರಿ ನೌಕರರು, ಆದಾಯ ತೆರಿಗೆ ಪಾವತಿದಾರರ ಬಿಪಿಎಲ್ ಕಾರ್ಡ್ ರದ್ದು : ಸಿಎಂ ಸ್ಪಷ್ಟನೆ 
WhatsApp Group Join Now
Telegram Group Join Now

ಬೆಂಗಳೂರು : ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಪಡಿತರ ಚೀಟಿಯನ್ನೂ ರದ್ದು ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಹಾರ ಇಲಾಖೆ ಅಧಿಕಾರಿಗಳಿಗೆ ಕಟ್ಡುನಿಟ್ಡಿನ ಸೂಚನೆ ನೀಡಿದ್ದಾರೆ.

ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿದಂತೆ ಉಳಿದ ಯಾವುದೇ ಕುಟುಂಬದವರ ಪಡಿತರ ಚೀಟಿ ಈಗಾಗಲೇ ರದ್ದಾಗಿದ್ದರೆ, ಈ ತಕ್ಷಣವೇ ಅದನ್ನು ಸರಿ ಪಡಿಸಿ, ಕುಟಂಬಗಳಿಗೆ ವಾಪಸ್ ಕಾರ್ಡ್ ನೀಡುವಂತೆ ನೀಡುವಂತೆ ಮುಖ್ಯಮಂತ್ರಿಗಳು ಆದೇಶಿಸಿದ್ದಾರೆ.

ರಾಜ್ಯದ ಬಡ ಕುಟುಂಗಳವರ ಪಡಿತರ ಚೀಟಿಗಳನ್ನು ವಿನಾಕಾರಣ ರದ್ದು ಮಾಡಿದರೆ ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವುದಾಗಿ ಮುಖ್ಯಮಂತ್ರಿಗಳು ಎಚ್ವರಿಕೆ ನೀಡಿದ್ದಾರೆ.ಈ ಮೂಲಕ ಬಿಪಿಎಲ್ ಕಾರ್ಡ್ ಕುರಿತು ಆತಂಕದಲ್ಲಿದ್ದ ಸಾವಿರಾರು ಬಡ ಕುಟುಂಬಗಳು ನಿಟ್ಟುಸಿರು ಬಿಡುವಂತಾಗಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!