Ad imageAd image

ಯು ಟಿ ಖಾದರ್ ಸಿಟ್ಟಿಗೆ ಮೂವರು ಅಧಿಕಾರಿಗಳು ಅಮಾನತಿಗೆ ಸಿಎಂ ಸೂಚನೆ

Bharath Vaibhav
ಯು ಟಿ ಖಾದರ್ ಸಿಟ್ಟಿಗೆ ಮೂವರು ಅಧಿಕಾರಿಗಳು ಅಮಾನತಿಗೆ ಸಿಎಂ ಸೂಚನೆ
WhatsApp Group Join Now
Telegram Group Join Now

ಬೆಂಗಳೂರು : ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಸಿಟ್ಟಿಗೆ ಮೂವರು ಅಧಿಕಾರಿಗಳ ತಲೆದಂಡವಾಗಿದೆ ಕಂದಾಯ ಇಲಾಖೆ ಅಲ್ಪಸಂಖ್ಯಾತ ಹಾಗೂ ಪಿಡಬ್ಲ್ಯೂಡಿ ಅಧಿಕಾರಿಗಳ ತಲೆದಂಡ ಆಗಿದ್ದು ಮೂರು ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ಕೊಟ್ಟಿದ್ದಾರೆ.

ಹೌದು ಉತ್ತರ ಒದಗಿಸಿದ ಇಲಾಖೆಗಳ ಹಿರಿಯ ಅಧಿಕಾರಿಗಳಿಗೆ ನೋಟಿಸ್ ನೀಡಲಾಗಿದೆ. ಸ್ಪೀಕರ್ ಯುಟಿ ಖಾದರ್ ಸಿಟ್ಟಿಗೆ ಇದೀಗ 3 ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ.

ಮೂವರು ಅಧಿಕಾರಿಗಳನ್ನು ತಕ್ಷಣ ಅಮಾನತುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದು ಉತ್ತರ ಒದಗಿಸದ ಹಿನ್ನೆಲೆ ಇಲಾಖೆಗಳ ಹಿರಿಯ ಅಧಿಕಾರಿಗಳಿಗೆ ನೋಟಿಸ್ ನೀಡಲಾಗಿದೆ.

ಪಿಡಬ್ಲ್ಯೂಡಿ ಇಲಾಖೆ, ಪಶು ಸಂಗೋಪನೆ, ಸಾರಿಗೆ, ಐಟಿಬಿಟಿ ಡಿಪಿಎಆರ್ ಹಾಗೂ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ನೋಟಿಸ್ ನೀಡಲಾಗಿದೆ. ಸ್ಪೀಕರ್ ಸೂಚನೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ನೋಟಿಸ್ ನೀಡಲು ಸೂಚನೆ ನೀಡಿದ್ದಾರೆ.

ಸರಿಯಾದ ಉತ್ತರ ನೀಡಿದ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿ ಎಂದು ಸಿಎಂ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ. ಸಿಎಂ ಸೂಚನೆಯ ಹಿನ್ನೆಲೆ ಮಧ್ಯಾಹ್ನ 2 ಗಂಟೆಗೆ ಸಿಎಸ್ ಶಾಲಿನಿ ರಜನಿಶ್ ಸಭೆ ಕರೆದಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!