ಯಾದಗಿರಿ : ಆರ್‌ಎಸ್‌ಎಸ್ ಗೀತೆ ಹಾಡಿದ ಕೂಡಲೇ ಡಿ.ಕೆ.ಶಿವಕುಮಾರ್ ಅವರನ್ನು ಬಿಜೆಪಿಯವರು ಮುಖ್ಯಮಂತ್ರಿ ಮಾಡುತ್ತಾರೆ ಎನ್ನುವುದಾದರೆ ನಾನು ಹಾಗೂ ನಮ್ಮ ಶಾಸಕರು ಸಹ ಹಾಡುತ್ತಾರೆ, ನಮ್ಮನ್ನು ಸಿಎಂ ಮಾಡುತ್ತಾರೆಯೇ? ಎಂದು ಸಚಿವ ಸತೀಶ್ ಜಾರಕಿಹೊಳಿ ವ್ಯಂಗವಾಡಿದ್ದಾರೆ.
ಸದನದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಆರ್‌ಎಸ್‌ಎಸ್ ಪ್ರಾರ್ಥನಾ ಗೀತೆ ‘ನಮಸ್ತೇ ಸದಾ ವತ್ಸಲೇ’ ಹಾಡಿರುವ ವಿಚಾರವಾಗಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಡಿ.ಕೆ.ಶಿವಕುಮಾರ್ ಯಾಕೆ ಹಾಗೆ ಹೇಳಿದ್ದಾರೆ ? ಏನು ಹೇಳಿದ್ದಾರೆ? ಎನ್ನುವ ಬಗ್ಗೆ ಅವರೇ ಸ್ಪಷ್ಟೀಕರಣ ಕೊಡಬೇಕು. ಆರೆಸ್ಸೆಸ್ ಗೀತೆ ಹಾಡಿದಾಕ್ಷಣ ಡಿಕೆಶಿ ಬಿಜೆಪಿ ಪರವಾಗಿ ಅಂತ ಹೇಗೆ ಹೇಳುತ್ತೀರಾ? ಎಂದರು.
ಮಾಜಿ ಸಚಿವ ಕೆ.ಎನ್.ರಾಜಣ್ಣ ವಜಾ ಆಗಿರೋ ವಿಷಯವೇ ಬೇರೆ, ಡಿಕೆಶಿ ಆರೆಸ್ಸೆಸ್ ಗೀತೆ ಹಾಡಿದ್ದೇ ಬೇರೆ. ನನಗೂ ಆರೆಸ್ಸೆಸ್ ಗೀತೆ ಪರಿಚಯವಿದೆ ಹಾಡಬೇಕು ಅಂತೇನಿಲ್ಲ. ಆರೆಸ್ಸೆಸ್ ಗೀತೆ ಹಾಡಿದ ಕೂಡಲೇ ಡಿಕೆಶಿಗೆ ಬಿಜೆಪಿಯವರು ಸಿಎಂ ಮಾಡುತ್ತಾರೆ ಎಂದರೆ ನನ್ನ ಜತೆಗೆ ನಮ್ಮ ಶಾಸಕರು ಹಾಡುತ್ತಾರೆ ಎಂದು ಹೇಳಿದರು.




