ಬೆಂಗಳೂರು: 2025-26ನೇ ಸಾಲಿನ ರಾಜ್ಯ ಬಜೆಟ್’ಗೆ ರಾಜ್ಯ ಸರ್ಕಾರ ಸಿದ್ಧತೆ ಆರಂಭಿಸಿದ್ದು, ಇಂದಿನಿಂದ 5 ದಿನಗಳ ಕಾಲ ವಿವಿಧ ಇಲಾಖೆಗಳ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಪೂರ್ವಭಾವಿ ಸಭೆಗಳನ್ನು ನಡೆಸಲಿದ್ದಾರೆ.
ಇಂದು 13 ಇಲಾಖೆಗಳ ಸಚಿವರು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಸಭೆಗಳನ್ನು ನಡೆಸಲಿದ್ದಾರೆ, ಶುಕ್ರವಾರ, ಶನಿವಾರ, ಸೋಮವಾರ ಮತ್ತು ಮುಂದಿನ ಗುರುವಾರ ಮತ್ತಷ್ಟು ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆಗಳನ್ನು ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.
16 ನೇ ಬಜೆಟ್ ಅನ್ನು ಮಂಡಿಸಲಿರುವ ಸಿದ್ದರಾಮಯ್ಯರ ಬಜೆಟ್ ಬಗ್ಗೆ ನಿರೀಕ್ಷೆ ಹೆಚ್ಚಾಗಿದೆ. ಸಿದ್ದರಾಮಯ್ಯ ಅವರು ಮಾ.7 ರಂದು ಅಥವಾ 14 ರಂದು ಬಜೆಟ್ ಮಂಡಿಸುವ ನಿರೀಕ್ಷೆಯಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.
ಇನ್ನು ಸಿದ್ದರಾಮಯ್ಯ ಮಂಡಿನೋವಿನ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿ ಡಿಸ್ಚಾರ್ಜ್ ಆಗಿದ್ದು, 2 ದಿನ ಎಲ್ಲಾ ಕಾರ್ಯಕ್ರಮ ರದ್ದಾಗಿತ್ತು. ಮಂಡಿ ನೋವು ಕಡಿಮೆಯಾದ ಹಿನ್ನೆಲೆ ಇಂದಿನಿಂದ ಮತ್ತೆ ತಮ್ಮ ಕೆಲಸದಲ್ಲಿ ತೊಡಗಲಿದ್ದಾರೆ.