ಬೆಂಗಳೂರು: ಮುಖ್ಯಮಂತ್ರಿ, ಸಚಿವರು, ಶಾಸಕರ ವೇತನ ಹೆಚ್ಚಳದ ಎರಡು ವಿಧೇಯಕಗಳಿಗೆ ರಾಜ್ಯಪಾಲರು ಅನುಮೋದನೆ ನೀಡಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯಪತ್ರ ಪ್ರಕಟಿಸಲಾಗಿದೆ.
ಮುಖ್ಯಮಂತ್ರಿ, ಸಚಿವರ ವೇತನ, ಭತ್ಯೆ ಹೆಚ್ಚಳದ ಕರ್ನಾಟಕ ಮಂತ್ರಿಗಳ ಸಂಬಳಗಳು ಮತ್ತು ಭತ್ಯೆಗಳ ತಿದ್ದುಪಡಿ ವಿಧೇಯಕ- 2025 ಹಾಗೂ ಸಭಾಧ್ಯಕ್ಷ, ಉಪ ಸಭಾಧ್ಯಕ್ಷ, ಸಭಾಪತಿ, ಉಪ ಸಭಾಪತಿ ಹಾಗೂ ಶಾಸಕರ ವೇತನ, ಭತ್ಯೆ ಹೆಚ್ಚಳದ ಕರ್ನಾಟಕ ವಿಧಾನ ಮಂಡಲದ ಸಂಬಳಗಳು, ನಿವೃತ್ತಿ ವೇತನಗಳು ಮತ್ತು ಭತ್ಯೆಗಳ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಮಂಡಲ ಅಧಿವೇಶನದಲ್ಲಿ ಅನುಮೋದನೆ ನೀಡಿ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿತ್ತು. ಇದೀಗ ರಾಜ್ಯಪಾಲರು ಈ ವಿಧೇಯಕಗಳಿಗೆ ಒಪ್ಪಿಗೆ ನೀಡಿದ್ದು, ಇದರ ಆಧಾರದ ಮೇಲೆ ಸರ್ಕಾರ ಅಧಿಸೂಚನೆ ಹೊರಡಿಸಿದೆ.