ಬೆಂಗಳೂರು: ಸರ್ಕಾರದ ಸಭೆ ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬದಲಾಗಿ ಪರಿಸರ ಸ್ನೇಹಿ ವಸ್ತು ಬಳಕೆಗೆ ಮತ್ತು ಕೆಎಂಎಫ್ ‘ನಂದಿನಿ’ ತಿನಿಸು ಬಳಕಗೆ ಸಿಎಂ ಸಿದ್ಧರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಸರ್ಕಾರಿ ಕಚೇರಿಗಳು ಹಾಗೂ ಸಾರ್ವಜನಿಕ ಸಭೆ ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲಿಗಳ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರ ಬಳಕೆ ಮಾಡುವಂತೆ ಈ ಹಿಂದೆಯೇ ಸೂಚನೆ ನೀಡಲಾಗಿದ್ದು, ಅದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವುದು ಮತ್ತು ಮುಖ್ಯಮಂತ್ರಿಗಳ, ಸಚಿವರುಗಳ ಸಭೆಗಳಲ್ಲಿ, ಸರ್ಕಾರದ ಎಲ್ಲಾ ಸಭೆ – ಕಾರ್ಯಕ್ರಮಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆಎಂಎಫ್‌ನ ನಂದಿನಿ ತಿನಿಸುಗಳನ್ನು ಕಡ್ಡಾಯವಾಗಿ ಬಳಸುವಂತೆ ಸೂಚಿಸಲು ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.




