ಬೆಳಗಾವಿ: ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ದುರಂತದಲ್ಲಿ ಹುತಾತ್ಮರಾದ ಕರ್ನಾಟಕದ ಸೈನಿಕರ ಪಾರ್ಥಿವ ಶರೀರಗಳು ಆಗಮಿಸಿದ್ದು, ಬೆಳಗಾವಿಯಲ್ಲಿ ಸಿಎಂ ಸಿದ್ದರಾಮಯ್ಯ ಅಂತಿಮ ನಮನ ಸಲ್ಲಿಸಿದ್ದಾರೆ.
ಇಂದು ಬೆಳಗ್ಗೆ 9:30 ಕ್ಕೆ ಬೆಳಗಾವಿಯ ರೆಜೆಮೆಂಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಯೋಧರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಬಳಿಕ ಯೋಧರ ಸ್ವಗ್ರಾಮಗಳಿಗೆ ಪಾರ್ಥಿವ ಶರೀರ ಕಳುಹಿಸಲಾಗುತ್ತದೆ.
ಇಂದು ಸರ್ಕಾರಿ ಶಾಲೆ ಮೈದಾನದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಇರಲಿದೆ. ಆಪ್ತರು, ಸಾರ್ವಜನಿಕರು, ಜನಪ್ರತಿನಿಧಿಗಳಿಗೆ ಅಂತಿಮ ನಮನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಜಮ್ಮು ಮತ್ತು ಕಾಶ್ಮೀರದ ಮೆಂಧಾರ್ನ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಮಂಗಳವಾರ ಸಂಜೆ ಯೋಧರನ್ನು ಕರೆದೊಯ್ಯುತ್ತಿದ್ದ ಸೇನಾ ವಾಹನವು ಕಮರಿಗೆ ಬಿದ್ದ ಪರಿಣಾಮ ಐವರು ಯೋಧರು ಹುತಾತ್ಮರಾಗಿದ್ದು, ದುರಂತದಲ್ಲಿ ಬೆಳಗಾವಿ ಬಳಿಯ ಸಾಂಬ್ರಾ ಗ್ರಾಮದ ಯೋಧ ಸುಬೇದಾರ್ ದಯಾನಂದ ತಿರಕಣ್ಣವರ (45), ಕುಂದಾಪುರ ಬಳಿಯ ಕೋಟೇಶ್ವರ ಬಿಜಾಡಿಯ ಅನೂಪ್ (33) ಮಹಾಲಿಂಗಪುರದ 25 ವರ್ಷದ ಮಹೇಶ್ ಮರಿಗೊಂಡ ಹುತಾತ್ಮರಾಗಿದ್ದಾರೆ.