ಬೆಂಗಳೂರು: 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಯನ್ನು ಭಾರತೀಯ ಚಿತ್ರರಂಗದ ಮೇರು ನಟಿ, ಬಹುಭಾಷಾ ಕಲಾವಿದೆ ಶಬಾನಾ ಆಜ್ಞೆ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರದಾನ ಮಾಡಿದರು.
ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ, ನಟಿ ಶಬಾನಾ ಅಜಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.
ಪ್ರಶಸ್ತಿ ಜೊತೆಗೆ 10 ಲಕ್ಷದ ಚೆಕ್ ವಿತರಿಸಲಾಯಿತು.
ಈ ವೇಳೆ ವಿಶ್ವ ವಿಖ್ಯಾತ ಕವಿ, ಗೀತಕಾರ ಜಾವೇದ್ ಅಖರ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಈ ವೇಳೆ ಮಾತನಡಿದ ಸಿಎಂ ಸಿದ್ದರಾಮಯ್ಯ, ‘ಮಿಲೇಸುರ್ ಮೇರಾ ತುಮಾರಾ’ ದೃಶ್ಯಕಾವ್ಯ ನಮಗೆ ತುಂಬಾ ಇಷ್ಟ. ಇದರಲ್ಲಿ ನಿಮ್ಮನ್ನು ನೋಡಿದ್ದೇನೆ ಎಂದು ಹೇಳಿದರು. ಕರ್ನಾಟಕ ರಾಜ್ಯ ಸಾಂಸ್ಕೃತಿಕವಾಗಿ ಮತ್ತು ಸಂಗೀತಕ್ಕೆ ಅತ್ಯಂತ ಪ್ರಸಿದ್ಧಿ ಎಂದು ಶಬಾನಾ ಮತ್ತು ಜಾವೇದ್ ಅಖ ಮೆಚ್ಚುಗೆ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಭೀಮ್ ಸೇನ್ ಜೋಶಿ, ಕುಮಾರ ಗಂಧರ್ವ, ಗಂಗೂಬಾಯಿ ಹಾನಗಲ್ ಇವರಲ್ಲಾ ಹಿಂದೂಸ್ತಾನಿ ಸಂಗೀತದ ದಿಗ್ಗಜರು, ನಮ್ಮ ರಾಜ್ಯದ ಹೆಮ್ಮೆ ಇವರೆಲ್ಲಾ ಧಾರವಾಡದವರು ಎನ್ನುವುದು ಮತ್ತೊಂದು ವಿಶೇಷ ಎಂದರು.