ದೆಹಲಿ: ಕರ್ನಾಟಕ ಸರಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಸತೀಶ ಅಣ್ಣಾ ಜಾರಕಿಹೊಳಿಯವರು ದೆಹಲಿಯಲ್ಲಿ ಮಾನ್ಯ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರೊಂದಿಗೆ ನೂತನವಾಗಿ ನಿರ್ಮಿಸಿರುವ ಕರ್ನಾಟಕ ಭವನ-1ರ ಕಟ್ಟಡವನ್ನು ಲೋಕಾರ್ಪಣೆಗೊಳಿಸಿ, ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷರು ಹಾಗೂ ರಾಜ್ಯಸಭೆ ಪ್ರತಿಪಕ್ಷ ನಾಯಕರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ, ಉಪ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್,ಸಚಿವರಾದ, ಡಾ. ಮಹಾದೇವಪ್ಪ, ಶ್ರೀ ಕೆ.ಎನ್. ರಾಜಣ್ಣ, ಕೆ.ಎಚ್. ಮುನಿಯಪ್ಪ ಮತ್ತಿತರ ಗಣ್ಯರು ಸಮಾರಂಭದಲ್ಲಿ ಹಾಜರಿದ್ದರು.
ವರದಿ: ರಾಜು ಮುಂಡೆ